ಪರಿಶಿಷ್ಟರ ಜಮೀನು ಪರಭಾರೆ: ಸರ್ಕಾರದ ಅನುಮತಿ ಅಗತ್ಯ
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಸೇರಿದ ಕೆಲವು ಭೂಮಿಗಳ ಪರಭಾರೆ ನಿಷೇಧ ಕಾಯ್ದೆ 1978ರ ಕಲಂ 4 (2)ರನ್ವಯ ಮಂಜೂರಾತಿಯಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡುವಂತಿಲ್ಲ. ಆದರೆ, ಕಲಂ 7ರಂತೆ ಮಂಜೂರಾತಿಯಾದ ಜಮೀನನ್ನು ಅಡವಿಡಲು ಯಾವುದೇ ಕಾನೂನು ತೊಡಕು ಇರುವುದಿಲ್ಲ ಎಂದು ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. ಶಾಸಕ ಪ್ರಮೋದ್‌ಮಧ್ವರಾಜ್ ಅವರು ಇತ್ತೀಚಿನ ವಿಧಾನಸಭಾ ಅಧಿವೇಶನದಲ್ಲಿ ಈ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಜಮೀನು ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಅತಿಕ್ರಮಣ ನಮೂನೆ 50, 53 ಅರ್ಜಿ ಸಲ್ಲಿಸಿದ ವಿಸ್ತೀರ್ಣ ಕಳೆದು ಬಾಕಿ ಇರುವ 95.02 ಎಕ್ರೆ ವಿಸ್ತೀರ್ಣ ಜಮೀನನ್ನು ಅರ್ಹರಿಗೆ ಮಂಜೂರು ಮಾಡುವ ಬಗ್ಗೆ ತನಿಖೆ ನಡೆಸಿ ಪ್ರಸ್ತಾವನೆ ಕಳುಹಿಸಿಕೊಡಲು ತಹಸೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ. ಈ ಜಮೀನು ಅಳತೆ ಕಾರ್ಯ ಮುಗಿದ ನಂತರ ಅರ್ಹ ಪ್ರಕರಣಗಳನ್ನು ಪರಿಶೀಲಿಸಿ ಮಂಜೂರಾತಿ ಕ್ರಮ ಕೈಗೊಳ್ಳಲಾಗುವುದು. ಆಶ್ರಯ ಯೋಜನೆಯ ನಿವೇಶನಗಳಲ್ಲಿ ವಾಸಿಸುವ ಅರ್ಹ ಭೂ ರಹಿತರಿಗೆ ಅವರ ಅರ್ಹತೆಯನ್ನು ಖಚಿತಪಡಿಸಿಕೊಂಡು ಹಕ್ಕುಪತ್ರವನ್ನು ನೀಡಲಾಗುತ್ತಿದೆ ಎಂದು ಕಂದಾಯ ಸಚಿವರು ಉತ್ತರಿಸಿದ್ದಾರೆ ಎಂದು ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

