ಉಡುಪಿ

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯ ಉದ್ಘಾಟನೆ

Published On :

ಕುಂದಾಪುರ: ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾವಳಿ ಇತ್ತೀಚೆಗೆ ಜರುಗಿತು.
ಪ.ಪೂ. ಶಿಕ್ಷಣ ಇಲಾಖೆ ಉಡುಪಿ ಜಿಲ್ಲಾ ವಿಭಾಗದ ಕ್ರೀಡಾ ಸಂಯೋಜಕ ಶ್ರೀಧರ ಶೆಟ್ಟಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ದೈಹಿಕ ಶಿಕ್ಷಕ ನಿರ್ದೇಶಕರ ಸಂಘದ ನಿಕಟ ಪೂರ್ವಾಧ್ಯಕ್ಷ ನಾಗರಾಜ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಎನ್.ಎಸ್. ಅಡಿಗ ಇದ್ದರು.
ತಾಲೂಕಿನ ಸುಮಾರು 20 ಸಂಸ್ಥೆಗಳ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

ಯಕ್ಷಗಾನ ಕಲಾರಂಗಕ್ಕೆ ಬಿ.ಆರ್. ಶೆಟ್ಟಿ ಭೇಟಿ
ಉಡುಪಿ: ದುಬೈನಲ್ಲಿ ನೆಲೆಸಿರುವ ಉದ್ಯಮಿ ಉಡುಪಿಯ ಡಾ.ಬಿ.ಆರ್. ಶೆಟ್ಟಿ ಅವರು ಇತ್ತೀಚೆಗೆ ಉಡುಪಿ ಯಕ್ಷಗಾನ ಕಲಾರಂಗ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಸಮಾಜಮುಖಿ ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆ ಕಾರ್ಯದರ್ಶಿ ಮುರಳಿ ಕಡೆಕಾರ್ ಸಂಸ್ಥೆಯ ಸಮಗ್ರ ಕಾರ್ಯಚಟುವಟಿಕೆಗಳ ಪರಿಚಯ ಮಾಡಿದರು. ಉಪಾಧ್ಯಕ್ಷ ಎಸ್.ವಿ. ಭಟ್ ಅವರು ಬಿ.ಆರ್. ಶೆಟ್ಟಿ ಅವರನ್ನು ಗೌರವಿಸಿದರು. ವಾಸ್ತು ತಜ್ಞ ನಾಗೇಶ್ ಹೆಗ್ಡೆ, ಯು. ಉಪೇಂದ್ರ, ನಾರಾಯಣ ಎಂ. ಹೆಗಡೆ, ಎಚ್.ಎನ್. ವೆಂಕಟೇಶ್, ಭಾಸ್ಕರ ತಂತ್ರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.