ಮುದ್ದು ಕೃಷ್ಣರಿಗೆ ಬಹುಮಾನ ವಿತರಣೆ
ಪರ್ಕಳ: ಇಲ್ಲಿನ ರೋಟರಿ, ಸ್ವರ್ಣ ಫ್ರೆಂಡ್ಸ್ ಕ್ಲಬ್ ಗೋಳಿಕಟ್ಟೆ ಹೆರ್ಗ, ಪರ್ಕಳದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಆಯೋಜಿಸಲಾದ ಮುದ್ದು ಕೃಷ್ಣ ಸ್ಪರ್ಧೆಯ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ರೋಟರಿ ಅಧ್ಯಕ್ಷ ಎಸ್.ಎನ್.ನಾಯಕ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಮುದ್ದುಕೃಷ್ಣ ಸ್ಪರ್ಧೆಯಲ್ಲಿ 1 ರಿಂದ 3 ವರ್ಷದ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಸ್ವಸ್ತಿಕ್ ಐತಾಳ್ ಪರ್ಕಳ, ದ್ವೀತಿಯ ಅಭಯ್ ಮಣಿಪಾಲ, 3 ರಿಂದ 5 ವರ್ಷದ ವಿಭಾಗದಲ್ಲಿ ಪ್ರಥಮ ಮುಕುಂದ ನಾಯಕ್ ಮಣಿಪಾಲ, ದ್ವೀತಿಯ ರೀತು ಪಿ. ಶೆಟ್ಟಿ ಆತ್ರಾಡಿ, 5ರಿಂದ 7 ವರ್ಷದ ವಿಭಾಗದಲ್ಲಿ ಪ್ರಥಮ ಸುಪ್ರಜಾ ಕಾಮತ್ ಪರ್ಕಳ, ದ್ವೀತಿಯಾ ಕೇತನ್ ನಿಟ್ಟೂರು ಇವರು ಪಡೆದರು. ವಿಜೇತ ಮಕ್ಕಳಿಗೆ ವಲಯ 2 ರ ಸಹಾಯಕ ಗವರ್ನರ್ ಎಂ. ಮಹೇಶ್ ಕುಮಾರ್ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಎಸ್.ಎನ್. ನಾಯಕ್, ಮಿತ್ರಾ ಭಂಡಾರ್ಕರ್, ಡಾ. ಕೃಷ್ಣಮೂರ್ತಿ ಭಟ್, ಗೀತಾಶ್ರೀ ಉಪಾಧ್ಯಾ, ಪರ್ಕಳದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಸ್ವರ್ಣ ಫ್ರೆಂಡ್ಸ್ ಸಂಘದ ಅಧ್ಯಕ್ಷ ಜಗದೀಶ್ ಶೇರಿಗಾರ್, ಸದಸ್ಯರಾದ ರಂಜಿತ್, ಪ್ರಶಾಂತ್, ಚರಣ್, ವಿನಯ್ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 80ಕ್ಕಿಂತ ಹೆಚ್ಚು ಪುಟಾಣಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಎಲ್ಲರಿಗೂ ಬಹುಮಾನ ವಿತರಿಸಲಾಯಿತು. ಸಮುದಾಯ ಸೇವಾ ನಿರ್ದೇಶಕ ಎಂ. ಮಂಜುನಾಥ ಉಪಾಧ್ಯ ನಿರೂಪಿಸಿದರು.
ವಿವಿ ಮಟ್ಟದ ಸ್ಪರ್ಧೆ 'ಸಂಖ್ಯಾ 2013'
ಉಡುಪಿ: ಜಗತ್ತಿನಲ್ಲಿ ಸಂಖ್ಯಾಶಾಸ್ತ್ರಕ್ಕೆ ಬೇಡಿಕೆ ಹೆಚ್ಚುತ್ತಿದೆ. ಸಂಖ್ಯಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆಯುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ. ಅಧಿಕ ಬೇಡಿಕೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂಖ್ಯಾಶಾಸ್ತ್ರದ ಅಧ್ಯಯನದತ್ತ ಒಲವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದರು. ಅವರು ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗವು ಅಂತಾರಾಷ್ಟ್ರೀಯ ಸಂಖ್ಯಾಶಾಸ್ತ್ರ ವರ್ಷದ ಅಂಗವಾಗಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಸ್ಪರ್ಧೆ ಸಂಖ್ಯಾ 2013ನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೆ. ಸದಾಶಿವ ರಾವ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ. ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಇಸ್ಮಾಯಿಲ್, ನಿವೃತ್ತ ಪ್ರಾಂಶುಪಾಲ ಪ್ರೊ. ರಾಜಮೋಹನ್, ಕಾಲೇಜಿನ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕಿಶೋರ್ ರಾವ್ ಸ್ವಾಗತಿಸಿದರು. ಅಕ್ಷತಾ ಅಡಿಗ ನಿರೂಪಿಸಿ ಚಿನ್ಮಯಿ ಭಟ್ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

