ಬ್ಯಾಂಕಿಂಗ್ ಕ್ಷೇತ್ರ ಸಾಧನೆ ಪ್ರಯೋಜನ ನಿರುದ್ಯೋಗಿಗಳಿಗೆ ಸಿಗಬೇಕು: ಪ್ರಮೋದ್
ಮಣಿಪಾಲ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಡುಪಿ ಹಾಗೂ ದ.ಕ. ಜಿಲ್ಲೆ ಮಹತ್ತರ ಸಾಧನೆ ಮಾಡಿದೆ. ಆದರೆ ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳದೇ, ಇನ್ನೂ ಹೆಚ್ಚು ಸಾಧನೆ ಮಾಡಬೇಕು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಈ ಸಾಧನೆಯ ಪ್ರಯೋಜನ ನಿರುದ್ಯೋಗಿ ಯುವಕರಿಗೆ ಸಿಗುವಂತಾಗಬೇಕು ಎಂದು ಶಾಸಕ ಪ್ರಮೋದ್ ಮಧ್ವರಾಜ್ ಸಲಹೆ ಮಾಡಿದ್ದಾರೆ.
ಅವರು ಶುಕ್ರವಾರ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಜಿಲ್ಲಾ ಕೈಗಾರಿಕಾ ಕೇಂದ್ರ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ 2013-14ರ ಉದ್ಯಮಶೀಲತಾ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಯುವಜನತೆ ಸ್ವಉದ್ಯೋಗ ಮಾಡಲು ಮುಂದೆ ಬಂದಾಗ ಅವರಿಗೆ ಬ್ಯಾಂಕ್ ಹಾಗೂ ಇಲಾಖೆಗಳು ಸೂಕ್ತ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯುವ ಜನತೆ ಸರ್ಕಾರಿ ಯೋಜನೆಗಳ ಲಾಭ ಪಡೆದುಕೊಳ್ಳಲು ಆಸಕ್ತಿವಹಿಸಬೇಕು, ಅದಕ್ಕೆ ಇಲಾಖೆಗಳು ಸ್ಪಂದಿಸಬೇಕು ಎಂದವರು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್, ಜಿಪಂ ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು, ಸಿಂಡಿಕೇಟ್ ಬ್ಯಾಂಕ್ನ ಲೀಡ್ ಡಿಸ್ಟ್ರಿಕ್ ಮುಖ್ಯ ಪ್ರಬಂಧಕ ಸುಬ್ಬರಾವ್, ತಾಪಂ ಸದಸ್ಯ ರೋಶನಿ ವಲ್ವೇರಾ, ಸಾಣೂರು ಗ್ರಾಪಂ ಸದಸ್ಯ ನರಸಿಂಹ ಕಾಮತ್, ನಗರಸಭಾ ಸದಸ್ಯ ರಮೇಶ್ ಕಾಂಚನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ್, ಬೆಂಗಳೂರು ಖಾದಿ ಗ್ರಾಮೋದ್ಯೋಗ ಆಯೋಗದ ನೋಡಲ್ ಅಧಿಕಾರಿ ಎಂ.ಆರ್. ಕೇಶವನ್, ಜಿಲ್ಲಾ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಭಿವೃದ್ಧಿ ಅಧಿಕಾರಿ ಮಂಜುನಾಥ ಕಲ್ಕೇರಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕೈಗಾರಿಕಾ ಉತ್ತೇಜನಾಧಿಕಾರಿ ಎಸ್.ಎಚ್. ಮಹೇಶ್ವರಪ್ಪ ಸ್ವಾಗತಿಸಿದರು. ಶಶಿಕಲಾ ನಿರೂಪಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

