ಉಡುಪಿ

ಸಿದ್ದಾಪುರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Published On :

ಮಂಗಳೂರು: 110/11 ಕೆ.ವಿ. ಹೊಸಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ 11.ಕೆ.ವಿ. ಸಿದ್ದಾಪುರ ಮತ್ತು ಜನ್ಸಾಲೆ ಮಾರ್ಗದಲ್ಲಿ ಪಾಲನಾ ಮತ್ತು ನಿರ್ವಹಣಾ ಕೆಲಸ ಪ್ರಯುಕ್ತ ಶನಿವಾರ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರದೇಶಗಳು: ಸಿದ್ದಾಪುರ, ಜನ್ಸಾಲೆ, ಅಜ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.    
ಇಂದು ವಿದ್ಯುತ್
ನಿಲುಗಡೆ
ಮಂಗಳೂರು: ಕುಂದಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕೋಟೇಶ್ವರ ಮಾರ್ಗದಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ.7ರಂದು ಬೆಳ್ಗೆಗ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಕೋಡಿ, ಹಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಬ್ರಹ್ಮಾವರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಳಲಗಿರಿ ಫೀಡರ್‌ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.10ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಉಪ್ಪೂರು, ಹಾವಂಜೆ, ಕೊಳಲಗಿರಿ, ಬೆಳ್ಮಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತರಬೇತಿ ಕಾರ್ಯಕ್ರಮ
ಉಡುಪಿ: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಯ ಯುವ ರೆಡ್ ಕ್ರಾಸ್ ಘಟಕದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.  ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಚಂದ್ರಶೇಖರ ಹಾಗೂ ಕಾರ್ಯದರ್ಶಿ ಜಾರ್ಜ್ ಸ್ಯಾಮುಯೆಲ್ ಇವರು ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ರೆಡ್‌ಕ್ರಾಸ್‌ನಿಂದ ಆಗುವ ಪ್ರಯೋಜನಗಳನ್ನು ತಿಳಿಸಿದರು.  ಪ್ರಭಾರ ಪ್ರಾಂಶುಪಾಲ ಪ್ರೊ. ಮಹೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕಿ ಸುಜಾತ ವಿ. ಶೇಟ್ ಸ್ವಾಗತಿಸಿದರು. ಸ್ಫೂರ್ತಿ ನಿರೂಪಿಸಿದರು. ರವಿಕಾಂತ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.