ಉಡುಪಿ

ಇಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Published On :

ಉಡುಪಿ: ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನಕ್ಕೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಹಿಳಾ ಮೀಸಲಾತಿ ಘೋಷಿಸಲಾಗಿದೆ.
ಕಾಂಗ್ರೆಸ್ ಪಕ್ಷ ನಗರಸಭೆಯಲ್ಲಿ ಬಹುಮತ ಹೊಂದಿದ್ದು, ಪಕ್ಷದಲ್ಲಿ ಪರಿಶಿಷ್ಟ ಜಾತಿಯ ಸಂಧ್ಯಾ ಕುಮಾರಿ ಮತ್ತು ಯುವರಾಜ್ ಪಿ. ಅರ್ಹರಾಗಿದ್ದಾರೆ. ಅವರಲ್ಲಿ ಬಹುತೇಕ ಯುವರಾಜ್ ಅವರೇ ಅಧ್ಯಕ್ಷರಾಗುವುದು ಅಂತಿಮವಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಮಹಿಳಾ ಮೀಸಲಾತಿ ಇರುವುದರಿಂದ, ಅಧ್ಯಕ್ಷ ಸ್ಥಾನಕ್ಕೂ ಮಹಿಳೆಯನ್ನೇ ಆಯ್ಕೆ ಮಾಡುವ ಸಂಭವ ಇಲ್ಲದಿರುವುದರಿಂದ ಸಂಧ್ಯಾ ಅವರು ಅವಕಾಶ ತಪ್ಪಿಸಿಕೊಂಡಿದ್ದಾರೆ.
ಉಪಾಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ 9 ಸದಸ್ಯೆಯರಿದ್ದು, ಅವರಲ್ಲಿ ಅಧ್ಯಕ್ಷ ಸ್ಥಾನದತ್ತ ಕಣ್ಣಿಟ್ಟಿದ್ದ ಅಮೃತಾ ಕೃಷ್ಣಮೂರ್ತಿ ಮತ್ತು ಮೀನಾಕ್ಷಿ ಮಾಧವ ಬನ್ನಂಜೆ ಉಪಾಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿರುವಂತೆ ತಾಣುತ್ತಿದೆ. ಅಲ್ಪಸಂಖ್ಯಾತ ಸಮುದಾಯಕ್ಕೂ ಪ್ರಾತಿನಿಧ್ಯತೆ ನೀಡುವ ನಿಟ್ಟಿನಲ್ಲಿ ಸೆಲಿನಾ ಕರ್ಕಡ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆರಿಸಲಾಗಿದೆ.
ಬಿಜೆಪಿಯಿಂದಲೂ ಸ್ಪರ್ಧೆ: ಕಳೆದ 50 ವರ್ಷಗಳಿಗೂ ಅಧಿಕ ಕಾಲ ನಗರಸಭೆಯನ್ನು ಆಳಿದ ಬಿಜೆಪಿ ಈ ಬಾರಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕಾಗಿದೆ. ಬಹುಮತ ಇಲ್ಲದಿದ್ದರೂ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ಗೆಲ್ಲುವ ಅವಕಾಶ ಇಲ್ಲದಿದ್ದರೂ ಪ್ರಾತಿನಿಧಿಕವಾಗಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಿದ್ಧತೆಗಳನ್ನು ನಡೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.