ಉಡುಪಿಯಲ್ಲಿ 'ಭಾರತಕ್ಕಾಗಿ ಓಟ'
ಉಡುಪಿ: ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆಯ ಪ್ರಯುಕ್ತ ಉಡುಪಿಯಲ್ಲಿ ಬುಧವಾರ 'ಭಾರತಕ್ಕಾಗಿ ಓಟ' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ನಗರದ ಕರಾವಳಿ ವೃತ್ತ, ಎಂಜಿಎಂ ಕಾಲೇಜು ಮತ್ತು ಜೋಡುಕಟ್ಟೆಯಿಂದ ಓಟದ ಮೂಲಕ ನಗರದ ಚಿತ್ತರಂಜನ್ ವೃತ್ತಕ್ಕೆ ಬಂದು ಅಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ವರ್ಷಾಚರಣೆಯ ಸಮಿತಿಯ ಸಂಯೋಜಕ ರವೀಂದ್ರ ಪುತ್ತೂರು ಮಾತನಾಡಿ, ಸ್ವಾಮಿ ವಿವೇಕಾನಂದ ಅವರು ನಮ್ಮ ದೇಶದ ಚಿತ್ರಣವನ್ನೇ ಬದಲಾಯಿಸಲು ಬಯಸಿದ್ದರು, ಅದಕ್ಕಾಗಿ ಅವರು ಯುವ ಜನತೆಯ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದರು, ಆದರೆ ಅವರ ಕನಸು ಕಂಡ ಬದಲಾವಣೆ ಇನ್ನೂ ಸಾಧ್ಯವಾಗಿಲ್ಲ, ಇಂದು ಆ ಬದಲಾವಣೆ ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಾಗಿದೆ. ಆದ್ದರಿಂದ ಯುವಜನತೆ ವಿವೇಕಾನಂದರು ಬಯಸಿದ್ದ ಬದಲಾವಣೆಯನ್ನು ತರುವಲ್ಲಿ ಪಣ ತೊಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ಸಂಯೋಜಕ ಸುಪ್ರಸಾದ್ ಶೆಟ್ಟಿ, ಸ್ವಾಮಿ ವಿವೇಕಾನಂದ ಅವರು ಯುವಶಕ್ತಿಯಿಂದ ದೇಶ ಅಭಿವೃದ್ಧಿ ಹೊಂದುತ್ತದೆ ಎಂಬ ದೃಢವಾದ ನಂಬಿಕೆಯನ್ನು ಇಟ್ಟುಕೊಂಡಿದ್ದರು. ಯುವಜನಾಂಗ ಭವ್ಯ ಭಾರತ ನಿರ್ಮಾಣದತ್ತ ಹೆಜ್ಜೆ ಇಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಉಪೇಂದ್ರ ನಾಯಕ್, ಸಮಿತಿಯ ಸದಸ್ಯ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಉದಯಕುಮಾರ್ ಶೆಟ್ಟಿ ಮತ್ತಿತರರು ಇದ್ದರು.
ನಗರದ ಪೂರ್ಣಪ್ರಜ್ಞ ಕಾಲೇಜು, ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು, ಮಣಿಪಾಲದ ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲ, ವೈಕುಂಠ ಬಾಳಿಗ ಕಾಲೇಜು ಮತ್ತಿತರರ ಕಾಲೇಜುಗಳ ವಿದ್ಯಾರ್ಥಿಗಳು ಈ ಓಟ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

