ಶಿಕ್ಷಕ ವೃತ್ತಿ ಗೌರವ, ಆತ್ಮಸಂತೃಪ್ತಿ ನೀಡುವಂತದ್ದು: ಮೋಹಿನಿ ಪೈ
ಉಡುಪಿ: ಇತರ ಎಲ್ಲಾ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಗೌರವ ಮತ್ತು ಆತ್ಮಸಂತೃಪ್ತಿ ನೀಡುವಂತದ್ದು. ಆದುದರಿಂದ ಯುವ ಪದವೀಧರರು ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಒಳಕಾಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಮೋಹಿನಿ ಸದಾಶಿವ ಪೈ ಸಲಹೆ ನೀಡಿದರು.
ಅವರು ಉಡುಪಿ ಲಯನ್ಸ್ ಕ್ಲಬ್ ವತಿಯಿಂದ ಮಾಜಿ ರಾಷ್ಟ್ರಪತಿ ಸರ್ವಪಳ್ಳಿ ರಾಧಾಕೃಷ್ಣನ್ ಅವರ 126 ಜನ್ಮದಿನದ ಪ್ರಯುಕ್ತ ಶಿಕ್ಷಕ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲರಾದ ಡಾ.ಎ. ರವೀಂದ್ರನಾಥ ಶೆಟ್ಟಿ, ಪ್ರೊ. ಎಲ್ಫ್ರೆಡ್ ಡಿ' ಸೋಜಾ, ರಂಜನ್ ಕಲ್ಕೂರು, ಇಂದೂ ರಮಾನಂದ ಭಟ್, ರಂಜನಾ ಇದ್ದರು.
ಲಯನ್ಸ್ ಕಾರ್ಯದರ್ಶಿ ಹರಿಪ್ರಸಾದ್ ಸ್ವಾಗತಿಸಿದರು. ಕೋಶಾಧಿಕಾರಿ ಮನೋಜ್ ಪ್ರಭು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

