ಹೆಜಮಾಡಿ: 623ನೇ ಮದ್ಯವರ್ಜನ ಶಿಬಿರ ಉದ್ಘಾಟನೆ
ಪಡುಬಿದ್ರಿ: ದುಶ್ಚಟಗಳು ಅಂಟಿಕೊಳ್ಳುವುದಕ್ಕೆ ಮನಸ್ಸಿನ ದುರ್ಬಲತೆಯೇ ಕಾರಣ. ಇಂತಹ ಚಟಗಳು ಹತ್ತಿರ ಬಾರದಂತೆ ಯೋಗದಿಂದ ಮನಸ್ಸನ್ನು ಹತೋಟಿಯಲ್ಲಿಡಲು ಸಾಧ್ಯ ಎಂದು ಉಡುಪಿ ಜಿಲ್ಲಾ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಪೊಲೀಸ್ ನಿರೀಕ್ಷಕ ಜಿ.ಎಂ. ನಾಯ್ಕರ್ ಹೇಳಿದ್ದಾರೆ.
ಇಲ್ಲಿನ ಹೆಜಮಾಡಿ ನಾರಾಯಣಗುರು ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 623ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘಟನಾ ಸಮಿತಿ ಅಧ್ಯಕ್ಷ ಸುಧಾಕರ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಜಿಲ್ಲಾ ನಿರ್ದೇಶಕ ದುಗ್ಗೆಗೌಡ, ಜನಜಾಗೃತಿ ಸಮಿತಿ ತಾಲೂಕು ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ತಾಪಂ ಸದಸ್ಯ ಸಚಿನ್ ನಾಯಕ್, ವಿವಿಧ ಸಂಘಟನೆಗಳ ನಾಯಕರಾದ ದೊಂಬ ಪೂಜಾರಿ, ಪ್ರವೀಣ್ ಕುಮಾರ್ ಗುರ್ಮೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶಿವಪ್ರಸಾದ್ ಶೆಟ್ಟಿ, ದಯಾನಂದ ಹೆಜಮಾಡಿ, ಶೇಖಬ್ಬ ಹಾಜಿ ಮುಖ್ಯ ಅತಿಥಿಗಳಾಗಿದ್ದರು.
ಯೋಜನಾಧಿಕಾರಿ ಮಾಲತಿ ದಿನೇಶ್ ಸ್ವಾಗತಿಸಿದರು. ಶಿಬಿರಾಧಿಕಾರಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಲ್ವಿಚಾಕರ ಚಂದ್ರ ಮಧುವನ ನಿರೂಪಿಸಿದರು. ದಿವಾಕರ್ ಹೆಜ್ಮಾಡಿ ವಂದಿಸಿದರು.
ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡದ ಮಧ್ಯವರ್ಜನ ಶಿಬಿರದಲ್ಲಿ 60ಕ್ಕೂ ಅಧಿಕ ಮಂದಿ ಮದ್ಯಮುಕ್ತರಾಗುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

