ಉಡುಪಿ

ಕುಕ್ಕುಂದೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Published On :

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕುಕ್ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರು ನಾಗರಾಜ (46) ವಿಪರೀತ ಅಮಲು ಪದಾರ್ಥ ಸೇವಿಸುವ ಚಟವುಳ್ಳವರಾಗಿದ್ದು, ಇದೇ ಕಾರಣದಿಂದ ಮಾನಸಿಕವಾಗಿ ನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಮೃತರ ಮಗಳಾದ ಆಶಾ ನೀಡಿದ ದೂರಿನಂತೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವಿಷಜಂತು ಕಡಿದು ಮಹಿಳೆ ಸಾವು
ಕಾರ್ಕಳ: ವಿಷಜಂತು ಕಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಕಸಬ ಗ್ರಾಮದ ತೆಳ್ಳಾರು ಎಂಬಲ್ಲಿ ಸೋಮವಾರ ನಡೆದಿದೆ. ಮೃತರು ಲಕ್ಷ್ಮಿ (62) ಇವರು ಕಸಬ ಗ್ರಾಮದ ತೆಳ್ಳಾರು ರಾಘವೇಂದ್ರ ಮಠದ ಬಳಿ ದನಗಳಿಗೆ ಹುಲ್ಲು ಕೊಯ್ಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಯಾವುದೋ ವಿಷಜಂತು ಕೈಗೆ ಕಚ್ಚಿದ್ದು, ಸ್ಥಳೀಯರು ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ತೀವ್ರ ಅಸ್ವಸ್ಥಗೊಂಡ ಲಕ್ಷ್ಮೀ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಲಕ್ಷ್ಮೀ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಗಣೇಶ್ ದೇವಾಡಿಗ ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.