ಲೈಂಗಿಕ ಕಿರುಕುಳ; ಇಬ್ಬರ ಸೆರೆ
ಮಣಿಪಾಲ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದಲ್ಲಿ ರಾಜ್ಯದ ಗಮನ ಸೆಳೆದಿದ್ದ ಮಣಿಪಾಲದಲ್ಲಿ ಇನ್ನೊಂದು ಲೈಂಗಿಕ ಕಿರುಕುಳ ನಡೆದಿರುವ ಪ್ರಕರಣ ತಡವಾಗಿ ಬಹಿರಂಗಗೊಂಡಿದೆ.
ಮೂರು ವರ್ಷದ ಬಾಲಕಿ, ಖಾಸಗಿ ಶಾಲೆಯೊಂದರ ನರ್ಸರಿ ವಿದ್ಯಾರ್ಥಿನಿಗೆ ಆಕೆ ಶಾಲೆಗೆ ತೆರಳುವ ಬಸ್‌ನ ನಿರ್ವಾಹಕರಾದ ಸುಧೀರ್ ಹಾಗೂ ನಿರ್ವಾಹಕ ಕಂ ಕ್ಲೀನರ್ ಶುಭಕುಮಾರ್ (30) 4 ದಿನಗಳ ಹಿಂದೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಶನಿವಾರ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಭಾನುವಾರ ಬಂಧಿಸಲಾಗಿದ್ದು, ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಅನಾರೋಗ್ಯದಿಂದ ಸೈನಿಕ ಸಾವು
ಭಾಲ್ಕಿ: ಅನಾರೋಗ್ಯದಿಂದ ಬಳಲುತ್ತಿದ್ದ ಸೈನಿಕನೊಬ್ಬ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಮೃತಪಟ್ಟಿದ್ದಾನೆ.
ಭಾಸ್ಕರ್ ಪಂಡರಿನಾಥ ಜೊಳದಾಪಕೆ (29) ಮೃತಪಟ್ಟವರು. ಈತ ಆಂಧ್ರದ ಸಿಕಂದರಾಬಾದ್ ವಲಯದ ಭೂ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲ್ಲಿಸುತ್ತಿದ್ದ. ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ. ಈತನ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ತಾಲೂಕು ಆಡಳಿತದಿಂದ ಶನಿವಾರ ನೆರವೇರಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಗ್ರಾಮೀಣ ಪೊಲೀಸ್ ಇನ್ಸ್‌ಪೆಕ್ಟರ್ ಕಳ್ಳಿಗುಡ್ಡ, ಖಟಕ ಚಿಂಚೋಳಿ ಠಾಣೆಯ ಪಿಎಸ್‌ಐ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

