ಉಡುಪಿ: ಬಿಜೆಪಿ ಮಹಿಳಾ ಮೋರ್ಚಾದಿಂದ ಮನೆಮನೆ ಸಭೆ
ಉಡುಪಿ: ಬಿಜೆಪಿ ಕಾರ್ಯಕರ್ತೆ ಆತ್ರಾಡಿ ಸುಮತಿ ಮನೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಚುನಾವಣಾ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮತ್ತು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾರ್ಗದರ್ಶನ ನೀಡಿದರು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀಣಾ ಎಸ್. ಶೆಟ್ಟಿ ಮತ್ತು ಕಾರ್ಯದರ್ಶಿ ರಮಾ ವೈ. ಶೆಟ್ಟಿ ಇದ್ದರು. ಸ್ಥಾನೀಯ ಸಮಿತಿ ಅಧ್ಯಕ್ಷ ಗಂಗಾಧರ ಪ್ರಭು, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಸ್ಥಳೀಯ ಶಿಕ್ಷಕ ಮಹಾಬಲ ಶೆಟ್ಟಿ ಇದ್ದರು. ಅರವಿಂದಾಚಾರ್ಯ ಸಭೆ ಸಂಯೋಜಿಸಿದ್ದರು.
ಕಡೆಕಾರ್ನಲ್ಲಿ ಪ್ರಚಾರ: ನಗರದ ಕಡೆಕಾರ್ ವಾರ್ಡ್ನ ಎ.ಎಂ. ಹೆಗ್ಡೆ ಮನೆಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಸಭೆ ನಡೆಸಲಾಯಿತು. ಜಿಲ್ಲಾಧ್ಯಕ್ಷೆ ಶೀಲಾ ಶೆಟ್ಟಿ ಅಭ್ಯರ್ಥಿಯನ್ನು ಪರಿಚಯಿಸಿದರು. ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಜಿಲ್ಲಾ ಕಾರ್ಯದರ್ಶಿ ಸಂಧ್ಯಾ ರಮೇಶ್, ನಗರಸಭಾ ಸದಸ್ಯೆ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಇದ್ದರು. ಕಡೆಕಾರು ಕುತ್ಪಾಡಿ ನೂತನ ಸ್ಥಾನೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ಶಕುಂತಳಾ, ಪ್ರಧಾನ ಕಾರ್ಯದರ್ಶಿ ಶಾರದಾ ರಾಘವೇಂದ್ರ, ಮತ್ತಿತರರು ಪಾಲ್ಗೊಂಡಿದ್ದರು.
'ಜನವಿರೋಧಿಯಾಗಿ ಬೆಳೆಯುತ್ತಿದೆ ಬಿಜೆಪಿ'
ಉಡುಪಿ: ತತ್ವಾದರ್ಶವಿಲ್ಲದ ರಾಜಕೀಯ, ಶ್ರಮವಿಲ್ಲದ ಆಸ್ತಿ ಸಂಪಾದನೆ, ಆತ್ಮಸಾಕ್ಷಿಯ ವಿರುದ್ಧ ಸಂತೋಷ, ಚಾರಿತ್ಯ ಹೀನ ಜ್ಞಾನ, ನೈತಿಕತೆ ಇಲ್ಲದ ವ್ಯಾಪಾರ, ತ್ಯಾಗವಿಲ್ಲದ ಪೂಜೆ, ಮಾನವತೆ ಇಲ್ಲದ ವಿಜ್ಞಾನ ಇವನ್ನು ಮಹಾತ್ಮ ಗಾಂಧಿ ಅವರು ಅಪರಾಧವೆಂದು ಕರೆದಿದ್ದಾರೆ. ಆದರೆ, ಬಿಜೆಪಿ ಇದೆಲ್ಲವನ್ನೂ ಮಾಡಿ ಮುಗಿಸಿದ್ದು, ಇದೀಗ ಜನ ವಿರೋಧಿಯಾಗಿ ಬೆಳೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಕಾಪು ಉತ್ತರ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಹಿರಿಯಡ್ಕ ಬಸ್ ನಿಲ್ದಾಣ ಬಳಿ ಜರುಗಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿ ಮಾತನಾಡಿದರು. ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಪ್ರಚಾರ ಸಮಿತಿಯ ಅಧ್ಯಕ್ಷ ಎ.ಎನ್. ರಾಜೇಂದ್ರ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕ ಕರ್ನೇಲಿಯೋ, ಕಾಂಗ್ರೆಸ್ ಮುಖಂಡರಾದ ಕೇಶವ ಕೋಟ್ಯಾನ್, ವಿನೋದ್ ಕುಮಾರ್, ಸಂಧ್ಯಾ ಶೆಟ್ಟಿ, ಕಿರಣ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

