ಜಿಲ್ಲಾ ಕೊಂಕಣಿ ವಿದ್ಯಾರ್ಥಿ ಸಮ್ಮೇಳನ 24ರಂದು

Updated on

ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಕುಂದಾಪುರದ ಜೈ ಕೊಂಕಣಿ ಸಂಸ್ಥೆ ಕುಂದಾಪುರ ಸರ್ಕಾರಿ ಪ.ಪೂ. ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ 24 ರಂದು ಏರ್ಪಡಿಸಿರುವ ಉಡುಪಿ ಜಿಲ್ಲಾ ಕೊಂಕಣಿ ವಿದ್ಯಾರ್ಥಿ ಸಮ್ಮೇಳನಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ನೋಂದಣಿ ಆರಂಭಗೊಂಡಿದೆ. ವಿದ್ಯಾರ್ಥಿಗಳೇ ನಡೆಸುವ ಈ ಸಮ್ಮೇಳನದಲ್ಲಿ ಉದ್ಘಾಟನೆಯಿಂದ ಸಮಾರೋಪದ ತನಕ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳೇ ಅತಿಥಿಗಳು, ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ. ವಿದ್ಯಾರ್ಥಿಗಳಿಂದಲೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಮ್ಮೇಳನ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದ್ದು, ಸಂಜೆ 5 ಗಂಟೆ ವರೆಗೆ ನಡೆಯಲಿದೆ. ಉಡುಪಿ ಜಿಲ್ಲೆಗೆ ಸೇರಿದ ಎಲ್ಲಾ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.


'ಮಾಮ್ಸ್‌' ವಿಶೇಷ ಉಪನ್ಯಾಸ
ಉಡುಪಿ: ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿಜ್ಞಾನ ಸಂಘದ ವತಿಯಿಂದ ಮಂಗಳ ಗ್ರಹದ ಬಗ್ಗೆ ಅಧ್ಯಯನ ಮಾಡುವ ಉಪಕರಣ 'ಮಾಮ್ಸ್‌' ಎಂಬ ವಿಷಯದ ಬಗ್ಗೆ ಮುಲ್ಕಿ ವಿಜಯ ಕಾಲೇಜಿನ ಬೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವೆಂಕಟೇಶ ಭಟ್ ಅವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು. ಕೆಲವು ವರ್ಷಗಳಲ್ಲಿ ಭೂಮಿಗೆ ಆಪತ್ತು ಒದಗಿದಾಗ ಜೀವಿಗಳು ವಾಸಿಸಲು ಬೇಕಾದ ಪರ್ಯಾಯ ವ್ಯವಸ್ಥೆ ಮಂಗಳಗ್ರಹದಲ್ಲಿ ಇದೆಯೇ ಎನ್ನುವುದನ್ನು ಈ ಉಪಕರಣ ತಿಳಿಸುತ್ತದೆ ಎಂಬ ಬಗ್ಗೆ ಅವರು ವಿವರವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಯೋಗಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಸುಶ್ಮಿತಾ ಸ್ವಾಗತಿಸಿದರೆ, ಭವ್ಯ ವಂದಿಸಿದರು. ಭವ್ಯ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com