ಉಡುಪಿ

ಸರ್ಕಾರಿ ಯೋಜನೆ ಸರಳೀಕರಣಗೊಳಿಸಲು ಸಮಿತಿ ರಚನೆ: ಪ್ರಮೋದ್ ಮಧ್ವರಾಜ್

Published On :

ಉಡುಪಿ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಸುಲಭವಾಗಿ ಜನರಿಗೆ ದೊರೆಯುವ ನಿಟ್ಟಿನಲ್ಲಿ ಯೋಜನೆಗಳ ನಿಯಮಗಳನ್ನು ಸರಳೀಕರಣಗೊಳಿಸಲು ಸರ್ಕಾರ ಸಮಿತಿ ರಚಿಸಿದ್ದು, ಇದರಂತೆ ಎಲ್ಲಾ ಇಲಾಖೆಯ 5 ಉತ್ತಮ ಯೋಜನೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಇಲ್ಲಿನ ಡಾನ್‌ಬಾಸ್ಕೋ ಹಾಲ್‌ನಲ್ಲಿ ಉಡುಪಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕೆಥೋಲಿಕ್ ಸಭಾ ಆಶ್ರಯದಲ್ಲಿ ಕ್ರೈಸ್ತ ಸಮುದಾಯವರಿಗೆ ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಅಕ್ರಮ್ ಪಾಷ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಇರುವ ಕಾರ್ಯಕ್ರಮಗಳ ಕುರಿತು ಜನರಿಗ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸಿದೆ. ಪೊಲೀಸ್ ಇಲಾಖೆಯಲ್ಲಿ ಅಲ್ಪಸಂಖ್ಯಾತರ ಪ್ರಾತಿನಿಧ್ಯ ಸಾಕಷ್ಟು ಕಡಿಮೆ ಇದ್ದು, ಅದಕ್ಕಾಗಿ ಅವರಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಇದ್ದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕ ಮುಹಮ್ಮದ್ ಸಲೀಂ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಅಧಿಕಾರಿ ಆರ್. ಶೇಷಪ್ಪ ಇಲಾಖೆಯ ಯೋಜನ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಅಲ್ಪಸಂಖ್ಯಾತ ಇಲಾಖೆಯ ಅಧೀನ ಕಾರ್ಯದರ್ಶಿ ಅಬ್ಬಾಸ್ ಸಾಹೇಬ್, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ದೀಕ್ ಬಾಷಾ, ಕೆಥೋಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕ ಫರ್ಡಿನಾಂಡ್ ಗೋನ್ಸಾಲ್ವಿಸ್, ಕೆಥೋಲಿಕ್ ಸಭಾದ ಉಡುಪಿ ಅಧ್ಯಕ್ಷ ಕಿರಣ್ ಕ್ರಾಸ್ತಾ, ಇಫ್ಕಾ ಜಿಲ್ಲಾಧ್ಯಕ್ಷ ಪ್ರಶಾಂತ್ ಜತ್ತನ್ನ, ತಾ.ಪಂ. ಸದಸ್ಯೆ ವೆರೋನಿಕ ಕರ್ನೆಲಿಯೋ ಇದ್ದರು.
ಕೆಥೋಲಿಕ್ ಸಭಾದ ಮಾಜಿ ಅಧ್ಯಕ್ಷ ವಾಲ್ಟರ್ ಸಿರಿಲ್ ಪಿಂಟೋ ಸ್ವಾಗತಿಸಿದರು. ಆಲ್ವಿನ್ ಕ್ವಾಡ್ರಸ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.