ಜಿಲ್ಲೆಯ 313 ಮಂದಿಗೆ ಹಕ್ಕುಪತ್ರ ವಿತರಣೆ ಬಾಕಿ: ಯೋಗೇಶ್ವರ್
ಮಣಿಪಾಲ: ಜಿಲ್ಲೆಯಲ್ಲಿ 822 ನಿವೇಶನ ರಹಿತ ಅರ್ಜಿದಾರರ ಪೈಕಿ 2013ರ ಆಗಸ್ಟ್ನಿಂದ ಈವರೆಗೆ 509 ಮಂದಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 313 ಜನರಿಗೆ ಹಕ್ಕು ಪತ್ರ ವಿತರಿಸಲು ಬಾಕಿ ಇದೆ ಎಂದು ಕುಂದಾಪುರ ಸಹಾಯಕ ಆಯುಕ್ತ ಯೋಗೇಶ್ವರ್ ತಿಳಿಸಿದರು.
ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ನಿವೇಶನರಹಿತರಿಗೆ ವಿತರಣೆಗೆ ಒಟ್ಟು 850,86 ಎಕ್ರೆ ಭೂಮಿ ಗುರುತಿಸಲಾಗಿದ್ದು, ಉಡುಪಿ ತಾಲೂಕಿನ ಬೈರಂಪಳ್ಳಿ ಮತ್ತು ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ನಿವೇಶನ ಕಾದಿರಿಸಲು ಹೊಸ ಪ್ರಸ್ತಾಪ ಸಲ್ಲಿಸಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಕಂದಾಯ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅರಣ್ಯ ಇಲಾಖೆಯವರು ಸಂಯುಕ್ತವಾಗಿ ಹಾಗೂ ತುರ್ತಾಗಿ ನಿವೇಶನಕ್ಕೆ ಜಾಗ ಗುರುತಿಸಿ, ಹಂಚುವ ಕೆಲಸವಾಗಬೇಕು. ಜಿಲ್ಲೆಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ 6,000 ಮನೆ ನಿರ್ಮಾಣ ತಡೆಗೊಳಿಸಿರುವುದನ್ನು ತೆರವುಗೊಳಿಸಿದ್ದು, ಈ ಮನೆಗಳನ್ನು ಪೂರ್ಣಗೊಳಿಸಲು ಫೆ. 28ರವರೆಗೆ ರಾಜೀವ್ ಗಾಂಧಿ ವಸತಿ ನಿಗಮ ಕಾಲಾವಕಾಶ ಒದಗಿಸಿದೆ ಎಂದರು.
ಉದ್ಯೋಗ ಖಾತರಿ ಕಾಯಿದೆಯಡಿ ತೋಟಗಾರಿಕೆ ಇಲಾಖೆಯ ವತಿಯಿಂದ ಒಟ್ಟು 295 ಕಾಮಗಾರಿಗಳನ್ನು ಮುಗಿಸಿದ್ದು, ರು. 16.99 ಲಕ್ಷ, ಜಲಾನಯನ ಇಲಾಖೆಯಡಿ 51 ಕಾಮಗಾರಿಗಳಿಗೆ ರು. 15.22 ಲಕ್ಷ, ಸಾಮಾಜಿಕ ಅರಣ್ಯದಡಿ 23 ಕಾಮಗಾರಿಗಳಿಗೆ ರು. 12.21 ಲಕ್ಷ, ಗೇರು ನಿಗಮದಿಂದ ರು. 18.40 ಲಕ್ಷ ವೆಚ್ಚವಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಅನಿಲ ವಿತರಣೆ: ಜಿಲ್ಲೆಯಲ್ಲಿ ಅಡುಗೆ ಅನಿಲ ಏಜೆನ್ಸಿ ಸಮಸ್ಯೆ ಬಹಳಷ್ಟಿದ್ದು, ನಗರದ ಒಳಗಿನ ಏಜೆನ್ಸಿಯವರು ಗ್ಯಾಸ್ ಸಿಲಿಂಡರ್ಗಳನ್ನು ಕೇವಲ 3 ಕಿ.ಮೀ. ವ್ಯಾಪ್ತಿಯೊಳಗೆ ಮಾತ್ರ ವಿತರಣೆ ಮಾಡುತ್ತಿದ್ದಾರೆ. ಈ ಸಮಸ್ಯೆ ನಿವಾರಿಸಲು ಈಗಾಗಲೇ ಉಪನಿರ್ದೇಶಕರು ಆಹಾರ ಮತ್ತು ಪಡಿತರ ವಿತರಣೆ ಅವರು ಗ್ಯಾಸ್ ಏಜೆನ್ಸಿಗಳಿಗೆ ಪತ್ರ ಬರೆದಿದ್ದಾರೆ ಎಂದು ಅಧ್ಯಕ್ಷರಿಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಜಿ.ಪಂ.ನ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಶ್ರೀಯಾನ್, ಉದಯ ಕೋಟ್ಯಾನ್, ಜಿ.ಪಂ. ಸಿಇಒ ಕನಗವಲ್ಲಿ, ಉಪಕಾರ್ಯದರ್ಶಿ ಪ್ರಾಣೇಶ್ ರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

