ಕಾಡು ಪ್ರಾಣಿಗಳ ಅಕ್ರಮ ಸಂಗ್ರಹ
ಹಿರಿಯಡ್ಕ: ಇಲ್ಲಿನ ಬೆಳ್ಳಂಪಳ್ಳಿ ಗ್ರಾಮದ ಕುಕ್ಕಿಕಟ್ಟೆ ದರ್ಖಾಸು ಮನೆ ಎಂಬಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಾಡು ಪ್ರಾಣಿಗಳನ್ನು ಕೂಡಿ ಹಾಕಿದ್ದ ಪ್ರಕರಣವನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬುಧವಾರ ಪತ್ತೆ ಮಾಡಿದ್ದಾರೆ. ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಶೇಖರ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು. ಲಕ್ಷ್ಮಣ ನಾಯ್ಕ ಎಂಬವರು ಅಕ್ರಮವಾಗಿ ಯಾವುದೇ ದಾಖಲೆ ಇಲ್ಲದೇ ವಯರ್ನೆಟ್ ಪಂಜರದಲ್ಲಿ ಹಾಗೂ ಸಿಮೆಂಟು ಇಟ್ಟಿಗೆಯಿಂದ ನಿರ್ಮಿಸಿದ ಶೆಡ್ನಲ್ಲಿ 1 ಮುಳ್ಳು ಹಂದಿ ಮತ್ತು 2 ಕಾಡು ಬೆಕ್ಕುಗಳನ್ನು ಬಂಧಿಸಿಟ್ಟಿರುವುದನ್ನು ಪತ್ತೆ ಮಾಡಿ, ಈ ಪ್ರಾಣಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೀನುಗಾರ ಸಾವು
ಮಲ್ಪೆ: ಇಲ್ಲಿನ ಕೊಡವೂರು ಗ್ರಾಮದ ಮೀನುಗಾರ ಬೋಟಿನಿಂದ ಅರಬ್ಬಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಸಂತೋಷ್ ಕುಂದರ್ (32) ಮೃತರು. ಅವರು ಎಂದಿನಂತೆ ಕಾಮಧೇನು ಎಂಬ ಹೆಸರಿನ ಬೋಟಿನಲ್ಲಿ ಮೀನುಗಾರಿಕೆಗೆ ಮಲ್ಪೆ ತೀರದಿಂದ ಬೆಳಗ್ಗೆ 5ಕ್ಕೆ ಹೋಗಿ, ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು. ಮಧ್ಯಾಹ್ನ 12.30ರ ವೇಳೆಗೆ ಆಯತಪ್ಪಿ ಬೋಟಿನಿಂದ ಸಮುದ್ರಕ್ಕೆ ಬಿದ್ದರು. ತಕ್ಷಣ ಇತರ ಮೀನುಗಾರರು ಅವರನ್ನು ಹುಡುಕಿದರೂ ಅವರ ಪತ್ತೆಯಾರಿಗಲಿಲ್ಲ. ಸಂಜೆ 4.30ಕ್ಕೆ ಮಲ್ಪೆ ಸಮುದ್ರ ತೀರದಲ್ಲಿ ಅವರ ಶವ ಪತ್ತೆಯಾಗಿದೆ. ಅವರ ಸಹೋದರ ಸಂದೀಪ್ ದೂರಿನಂತೆ ಮಲ್ಪೆ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

