ವೈದ್ಯಕೀಯ ಉಪಕರಣ ಕೊಡುಗೆ
ಕೋಟ: ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಕೋಟದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಮೆಮೋರಿಯಲ್ ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಸುಮಾರು ರು. 14 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಮಹಾಪ್ರಬಂಧಕಿ ಅಶ್ವಿನ್ ಮೆಹ್ರಾ ಉಪಕರಣಗಳನ್ನು ಹಸ್ತಾಂತರಿಸಿದರು. ಕೋಟದಂತಹ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಾಧುನಿಕ ಉಪಕರಣಗಳನ್ನು ಕೊಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಮುಖ್ಯ ಅತಿಥಿ, ಬ್ಯಾಂಕ್ನ ಪ್ರಧಾನ ವ್ಯವಸ್ಥಾಪಕಿ ನಂದಿನಿ ರಾಡ್ರಿಕ್ಸ್, ಗ್ರಾಮೀಣ ಜನತೆಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ನೀಡುವ ಆಸ್ಪತ್ರೆಯ ಆಡಳಿತ ಮತ್ತು ವೈದ್ಯರನ್ನು ಅಭಿನಂದಿಸಿದರು. ಬ್ಯಾಂಕ್ ಉಪಮಹಾಪ್ರಬಂಧಕ ಚೆಲ್ಲಪ್ಪ ರಂಗಾಚಾರಿ ಮಾತನಾಡಿ, ಕಳೆದ 25 ವರ್ಷಗಳಿಂದಲೂ ಬ್ಯಾಂಕ್ ಸಾಮಾಜಿಕ ಕಳಕಳಿ ಹೊಂದಿದ್ದು, ಹಲವಾರು ಜನಪರ ಕೊಡುಗೆಗಳನ್ನು ನೀಡಿದೆ ಎಂದರು. ಲಯನ್ಸ್ ಟ್ರಸ್ಟ್ ಕಾರ್ಯದರ್ಶಿ ಕೃಷ್ಣಯ್ಯ ಶೆಟ್ಟಿ, ಖಜಾಂಚಿ ಎ. ಎಸ್. ಹೆಗ್ಡೆ, ಜೊತೆಕಾರ್ಯದರ್ಶಿ ಕರುಣಾಕರ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ವೈ. ದಯಾನಂದ ಶೆಟ್ಟಿ ಹಾಗೂ ಆಸ್ಪತ್ರೆ ವೈದ್ಯರಾದ ಡಾ. ಮನೋಜ್ ರಾಜ್ ಶೇಟ್, ಡಾ. ಅಜಿತ್ ಶೆಣೈ ಮತ್ತು ಡಾ. ಶ್ರೀಕಾಂತ್ ಶೆಟ್ಟಿ ಇದ್ದರು. ಲಯನ್ಸ್ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಶೆಟ್ಟಿ ಸ್ವಾಗತಿಸಿದರು. ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಪ್ರಬಂಧಕ ಪಿ. ಎಸ್. ಕಾರಂತ ಬ್ಯಾಂಕಿನ ದೇಣಿಗೆ ಬಗ್ಗೆ ವಿವರಿಸಿದರು. ಉಡುಪಿ ಶಾಖೆಯ ಮುಖ್ಯಸ್ಥ ಎಂ. ಶ್ರೀಪತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

