ಉಡುಪಿ

ಪ್ರತಿಯೊಬ್ಬರೂ ಆರ್ಥಿಕ, ಸಾಮಾಜಿಕ ಸ್ವಾವಲಂಬಿಯಾಗಿರಬೇಕು: ಡಾ. ಮಂಜುನಾಥ್

Published On :

ಗಂಗೊಳ್ಳಿ: ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣವೂ ಒಂದು ಮೈಲಿಗಲ್ಲು. ನಮ್ಮ ಬದುಕಿನಲ್ಲಿ ವಿಚಾರದ ಬಗ್ಗೆ ಸ್ಪಷ್ಟತೆ, ಸಾಧಿಸುವ, ಸಬಲೀಕರಣದ ಮತ್ತು ಸ್ವೀಕರಿಸುವ ಗುಣ ಇರಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆ ಮೂಲಕ ನೆರವು ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ ಹೇಳಿದರು.
ಅವರು ಬುಧವಾರ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಪಂಚಗಂಗಾವಳಿ ಮತ್ತು ಮೇಲ್ಗಂಗೊಳ್ಳಿ ಒಕ್ಕೂಟದ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದರು.
ಜನಜಾಗೃತಿ ವೇದಿಕೆ ತ್ರಾಸಿ ವಲಯ ಅಧ್ಯಕ್ಷ ಬಿ. ರಾಘವೇಂದ್ರ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಇದೇ ಸಂದರ್ಭ ವಿಕಲಚೇತನರಿಗೆ ಮಹಮ್ಮದ್ ಇಬ್ರಾಹಿಂ ಗೋವಾ, ದಿವಾಕರ ಎನ್. ಖಾರ್ವಿ ಹಾಗೂ ಡಾ.ಎಲ್.ಎಚ್. ಮಂಜುನಾಥ ಅವರು ನೀಡಿದ ಸಹಾಯಧನವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ಗಂಗೊಳ್ಳಿ ಶ್ರೀ ಸಿದ್ಧಿ ಫ್ರೀಜರ್ಸ್ನ ಮ್ಯಾನೇಜರ್ ಎಂ.ಎಂ. ಸುವರ್ಣ, ಸಾಹಿತಿ ಕೋ. ಶಿವಾನಂದ ಕಾರಂತ್, ಮೈಸೂರು ಅಬ್ದುಲ್ ನಜೀರ್ ಸಾಹೇಬ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವಿನೋದ ಗಂಗೊಳ್ಳಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹೇಮಲತಾ ಹೆಗ್ಡೆ, ಒಕ್ಕೂಟದ ನಿಕಟಪೂರ್ವಾಧ್ಯಕ್ಷ ಕೃಷ್ಣ ಪೂಜಾರಿ, ಜ್ಯೋತಿ, ನೂತನ ಅಧ್ಯಕ್ಷರಾದ ನಾಗರಾಜ ಖಾರ್ವಿ, ಇಂದಿರಾ ಬಿಲ್ಲವ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.
ಯೋಜನೆಯ ಸೇವಾ ಪ್ರತಿನಿಧಿ ವನಜಾ ಸ್ವಾಗತಿಸಿ, ಸೇವಾ ಪ್ರತಿನಿಧಿ ರಾಧಾ ವರದಿ ವಾಚಿಸಿದರು.
ತ್ರಾಸಿ ವಲಯ ಮೇಲ್ವಿಚಾರಕ ನಂಜುಡಿ ಕಾರ್ಯಕ್ರಮ ನಿರ್ವಹಿಸಿ, ಅರುಣ್ ಕುಮಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.