ಉಡುಪಿ

ಗೋಹತ್ಯೆ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಲಿ: ಹಿಂದೂ ಯುವ ಸೇನೆ

Published On :

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ 20 ಸಾವಿರಕ್ಕೂ ಅಧಿಕ ಗೋವುಗಳನ್ನು ಹತ್ಯೆಗೈದು ಬಂಧಿಸಲ್ಪಟ್ಟಿರುವ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಹಿಂದೂ ಯುವಸೇನೆ ಒತ್ತಾಯಿಸಿದೆ. ಯಾವ ರೀತಿ ಈ ಕಟುಕರು ಗೋವುಗಳಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದರೋ ಅದಕ್ಕಿಂತ ಕಠೋರ ಶಿಕ್ಷೆ ನೀಡಬೇಕು ಎಂದು ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ ಚೌಟ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ವಾವೂರು, ವಕ್ತಾರ ವಾಸುದೇವ ಭಟ್ ಪೆರಂಪಳ್ಳಿ ಆಗ್ರಹಿಸಿದ್ದಾರೆ. ಈ ಆರೋಪಿಗಳನ್ನು ಹಿಡಿದ ಪೊಲೀಸ್ ಇಲಾಖೆಯನ್ನು ಅವರು ಅಭಿನಂದಿಸಿದ್ದಾರೆ.
ಗ್ಯಾಸ್ ಬೆಲೆ ದಿಢೀರ್ ಏರಿಕೆ: ಖಂಡನೆ
ಕಾರ್ಕಳ: ಯಾವುದೇ ಮುನ್ಸೂಚನೆ ನೀಡದೆ ಕೇಂದ್ರ ಸರ್ಕಾರ ಆಟೋ ಗ್ಯಾಸ್ ಸೇರಿದಂತೆ ಸಬ್ಸಿಡಿ ರಹಿತ ಎಲ್‌ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವ ಗ್ಯಾಸ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಶಾಸಕ ಸುನಿಲ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಆಟೋ ಗ್ಯಾಸ್ ಕೆಜಿಗೆ ರು. 11.10 ಒಮ್ಮೆಗೇ ಏರಿಕೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್‌ಗೆ ದಿಢೀರ್ ರು. 220 ಏರಿಕೆ ಮಾಡಲಾಗಿದೆ. ವಾರ್ಷಿಕ 9 ಸಬ್ಸಿಡಿ ಸಹಿತ ಅನಿಲ ಸಿಲಿಂಡರ್‌ಗೆ ರು. 220 ಏರಿಕೆಯಾಗಿದೆ. ಇದರಿಂದಾಗಿ ಆಟೋ ರಿಕ್ಷಾ ಚಾಲಕರು ಹಾಗೂ ಮಧ್ಯಮ ವರ್ಗದ ಜನರಿಗೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದು ಏರಿಕೆ ಮಾಡಿರುವ ದರ ಕೂಡಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.