ಉಡುಪಿ

ಬೆನ್ನಿಹಿನ್ 'ಹೀಲಿಂಗ್‌' ಮೌಢ್ಯವಲ್ಲವೇ?; ಪೇಜಾವರಶ್ರೀ ಖಂಡನೆ

Published On :

ಉಡುಪಿ: ಮೌಢ್ಯ ವಿರೋಧಿ ಕಾನೂನು ಜಾರಿಗೆ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಧರ್ಮಪ್ರಚಾರಕ ಬೆನ್ನಿಹಿನ್ ಅವರ ಹೀಲಿಂಗ್ ಕಾರ್ಯಕ್ರಮಕ್ಕೆ ಅವಕಾಶ ನೀಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಮತ್ತು ಪೇಜಾವರ ಶ್ರೀ ವಿಶ್ವೇಶತೀರ್ಥರು ತೀವ್ರವಾಗಿ ಟೀಕಿಸಿದ್ದಾರೆ.
ತೊಗಾಡಿಯಾ ಬುಧವಾರ ಉಡುಪಿಯಲ್ಲಿ ಪೇಜಾವರ ಮಠಾಧೀಶರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ಪ್ರತಿಯೊಬ್ಬರಿಗೂ ತಮ್ಮ ಧರ್ಮದ ಬಗ್ಗೆ ಪ್ರಚಾರ ಮಾಡುವುದಕ್ಕೆ ಸಂವಿಧಾನ ಅವಕಾಶ ನೀಡುತ್ತದೆ. ಆದರೆ, ಮತಾಂತರಕ್ಕೆ ಅವಕಾಶ ನೀಡುವುದಿಲ್ಲ. ಬೆನ್ನಿಹಿನ್ ಹೀಲಿಂಗ್ ಮೂಲಕ ರೋಗ ಗುಣಪಡಿಸುವುದು ಒಂದು ನೆಪ ಮಾತ್ರ. ಅದರ ಹಿಂದಿರುವ ಉದ್ದೇಶ ಮತಾಂತರವೇ ಆಗಿದೆ. ಆದರೆ ಸರ್ಕಾರ ಕ್ರಿಶ್ಚಿಯನ್ ಲಾಬಿಗೆ ಮಣಿದು ಈ ಕಾರ್ಯಕ್ರಮಕ್ಕೆ ಅವಕಾಶ ನೀಡುತ್ತಿದೆ. ಸರ್ಕಾರ ತಕ್ಷಣ ಈ ಸಂವಿಧಾನ ವಿರೋಧಿ ಕಾರ್ಯಕ್ರಮ ನಿಲ್ಲಿಸಬೇಕು ಮತ್ತು ಕರ್ನಾಟಕದ ಜನತೆ ಈ ಕಾರ್ಯಕ್ರಮ ವಿರೋಧಿಸಬೇಕು' ಎಂದು ಹೇಳಿದರು.
ಅರ್ಕ ಖರೀದಿ-ತೊಗಾಡಿಯ:  ಪೇಜಾವರ ಮಠದ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥರು ತಮ್ಮ 1000 ಗೋವುಗಳ ಗೋಶಾಲೆಯ ಬಗ್ಗೆ ತೊಗಾಡಿಯ ಅವರೊಂದಿಗೆ ಮಾತುಕತೆ ನಡೆಸಿದರು. ಈ ಗೋವುಗಳ ಮೂತ್ರದಿಂದ ಔಷಧೀಯ ಗುಣಗಳುಳ್ಳ ಅರ್ಕ ತಯಾರಿಸಬಹುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.