'ಹಿಂದು ರಾಷ್ಟ್ರ ನಿರ್ಮಾಣ'ಕ್ಕೆ ಯಾವ ಹೋರಾಟಕ್ಕೂ ಸಿದ್ಧ
ಉಡುಪಿ: ಹಿಂದೂ ಸಮಾಜ, ಧರ್ಮ, ಸಂಸ್ಕೃತಿ ರಕ್ಷಣೆ ಹಾಗೂ ಹಿಂದೂ ರಾಷ್ಟ್ರ ನಿರ್ಮಾಣವೇ ವಿಶ್ವ ಹಿಂದೂ ಪರಿಷತ್ತಿನ ಗುರಿ. ಈ ಗುರಿ ಸಾಧನೆಗೆ ಪರಿಷತ್ತು ಯಾವ ಹೋರಾಟಕ್ಕೂ ಸಿದ್ಧ ಎಂದು ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯ ಹೇಳಿದ್ದಾರೆ.
ಬುಧವಾರ ನಗರದ ಪುರಭವನದಲ್ಲಿ ಧರ್ಮರಕ್ಷಾ ನಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಿಂದುಗಳಿಗೆ ರಕ್ಷಣೆಯೂ ಬೇಕು: ಹಿಂದುಗಳಿಗೆ ಇತರೆಲ್ಲಾ ಧರ್ಮಗಳಿಗೆ ಸಿಗುವಂತಹ ಎಲ್ಲಾ ಸೌಲಭ್ಯಗಳು ದೊರೆಯಬೇಕು. ಶಿಕ್ಷಣ, ಆರೋಗ್ಯ, ಉದ್ಯೋಗದ ಜೊತೆಗೆ ಹಿಂದೂಗಳಿಗೆ ರಕ್ಷಣೆಯೂ ಪರಿಪೂರ್ಣವಾಗಿ ಸಿಗಬೇಕು ಎಂದ ಅವರು, ಜಗತ್ತಿನ ಇತರ ರಾಷ್ಟ್ರಗಳಲ್ಲಿರುವ ಹಿಂದುಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಬದಲಿಗೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯದಲ್ಲಿ ಮೂಢನಂಬಿಕೆ ವಿರೋಧಿ ಕಾನೂನನ್ನು ಜಾರಿಗೆ ತರುವ ಪ್ರಯತ್ನ ಮಾಡುತ್ತಿದೆ. ಭಾರತದಲ್ಲಿ ಜನರು ನಂಬಿಕೆಗಳ ಮೇಲೆ ಬದುಕುತ್ತಿದ್ದಾರೆ. ಹೀಗಿರುವಾಗ ಮೂಢನಂಬಿಕೆ ಎಂಬ ಅಸ್ತ್ರ ಪ್ರಯೋಗಿಸುವುದು ಸರಿಯಲ್ಲ ಎಂದವರು ಹೇಳಿದರು.
ಪೊಲ್ಯ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿ.ಹಿಂ.ಪ. ಪ್ರಾಂತ್ಯ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ್ಯ ಕಾರ್ಯದರ್ಶಿ ಟಿ.ಎ.ಪಿ. ಶೆಣೈ, ಕ್ಷೇತ್ರೀಯ ಸಂಘಟನಾ ಪ್ರಮುಖ್ ಗೋಪಾಲ ಇದ್ದರು.
ವಿ.ಹಿಂ.ಪ. ಉಡುಪಿ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ನಾರಾಯಣ ಮಾನ್ಯ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

