ಉಡುಪಿ

ಸಂಘಟನೆಗಳಲ್ಲಿ ಉತ್ತಮ ಸ್ಪರ್ಧೆ ಪ್ರಗತಿಗೆ ದಾರಿ: ಡಾ. ಬಲ್ಲಾಳ್

Published On :

ಉಡುಪಿ: ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವಲ್ಲಿ ಇತರ ಸಂಘಟನೆಗಳೊಂದಿಗೆ ಉತ್ತಮವಾಗಿ ಸ್ಪರ್ಧೆ ಏರ್ಪಟ್ಟಲ್ಲಿ ಆಯಾ ಊರಿನ ಪ್ರಗತಿ ಸುಲಭ ಸಾಧ್ಯವಾಗುತ್ತದೆ ಎಂದು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ದೊಡ್ಡಣಗುಡ್ಡೆಯಲ್ಲಿ ಕರ್ನಾಟಕ ಗೃಹಮಂಡಳಿ ನಿವಾಸಿಗರ ಸಂಘದ ರಜತ ಮಹೋತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ನಿವಾಸಿಗರ ಸಂಘದ ಕೆಲಸವನ್ನು ಪ್ರಶಂಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪಿ. ಪ್ರಭಾಕರ ಭಟ್ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರಜತ ಸಮಿತಿಯ ಗೌರವಾಧ್ಯಕ್ಷ ಕೆ.ಎಂ. ಉಡುಪ ನೀಲಾವರ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಡಾ.ಎಂ.ಡಿ. ಹೆಗ್ಡೆ, ಉದ್ಯಮಿ ಪ್ರಭಾಕರ್ ಜಿ., ಸಂಘದ ಅಧ್ಯಕ್ಷ ಕುತ್ಪಾಡಿ ವಿಠಲ ಗಾಣಿಗ, ನಗರಸಭಾ ಸದಸ್ಯ ಆರ್.ಕೆ. ರಮೇಶ್ ಪೂಜಾರಿ, ಉಪಾಧ್ಯಕ್ಷ ರಾಮಚಂದ್ರ ಕೆ., ಹಫೀಜ್ ರೆಹಮಾನ್ ಉಪಸ್ಥಿತರಿದ್ದರು.  ರಜತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಎನ್. ರಾಮ ಭಟ್ ವರದಿಯನ್ನು ವಾಚಿಸಿದರು. ರಮೇಶ್ ಕೆ. ನಿರೂಪಿಸಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ ವೈವಿಧ್ಯ, ಪಿರ ಬನ್ನಗ ತುಳು ನಾಟಕ ಪ್ರದರ್ಶಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.