ಉಡುಪಿ

ಕಾನೂನುಬಾಹಿರವಾಗಿ ಬಸ್ ಬಳಸಿದರೆ ಪರವಾನಗಿ ರದ್ದು

Published On :

ಉಡುಪಿ: ಜಿಲ್ಲೆಯ ಕೆಲವು ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್‌ಗಳು ಹಾಗೂ ಶಾಲಾ ವಾಹನಗಳು ಕಾನೂನುಬಾಹಿರವಾಗಿ ರೂಟ್ ಬದಲಿಸಿ ಮದುವೆ, ಪ್ರವಾಸಕ್ಕಾಗಿ ಬಳಕೆಯಾಗುತ್ತಿವೆ. ಇದರಿಂದ ನಿತ್ಯ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಟೂರಿಸ್ಟ್ ಟ್ಯಾಕ್ಸಿಗಳಿಗೆ ತೊಂದರೆ ಆಗುತ್ತಿದ್ದು, ಇಂತಹ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಟ್ಯಾಕ್ಸಿಮೆನ್ಸ್  ಅಸೋಸಿಯೇಷನ್ ಜಿಲ್ಲಾಧಿಕಾರಿಗೆ ದೂರು ನೀಡಿದೆ.
ಈ ಹಿನ್ನೆಲೆಯಲ್ಲಿ ಖಾಸಗಿ ಸಿಟಿ ಬಸ್‌ಗಳು, ಸರ್ವಿಸ್ ಬಸ್‌ಗಳು, ಶಾಲಾ ವಾಹನಗಳು ಕಾಂಟ್ರಾಕ್ಟ್ ಕ್ಯಾರಿಯೇಜ್ ಪರವಾನಗಿ ಹೊಂದದೆ ತಮ್ಮ ಪರವಾನಗಿ ಷರತ್ತು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಮದುವೆ ಟ್ರಿಪ್, ಪ್ರವಾಸದ ಟ್ರಿಪ್‌ಗಳನ್ನು ಮಾಡುತ್ತಿದ್ದದ್ದು ಕಂಡು ಬಂದಲ್ಲಿ, ಅಂತಹ ವಾಹನಗಳನ್ನು ವಶಪಡಿಸಿಕೊಂಡು ಅವುಗಳಿಗೆ ಕಾಂಟ್ರಾಕ್ಟ್ ಕ್ಯಾರಿಯೇಜ್ ತೆರಿಗೆ ವಿಧಿಸಿ, ವಾಹನದ ಪರವಾನಗಿ ಅಮಾನತು/ರದ್ದುಗೊಳಿಸಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜಿ. ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.