ವೃತ್ತಿ ಕುರಿತು ಕೀಳರಿಮೆ ಬೇಡ: ಶಾಸಕ ಪ್ರಮೋದ್
ಉಡುಪಿ: ಪ್ರತಿಯೊಬ್ಬರೂ ತಮ್ಮ ವೃತ್ತಿ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು, ವೃತ್ತಿಯಲ್ಲಿ ಮೇಲು- ಕೀಳು ಇಲ್ಲ. ಪ್ರತಿಯೊಂದು ವೃತ್ತಿಗೂ ಅದರದೇ ಆದ ಶ್ರೇಷ್ಠತೆ ಇದೆ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬಿಗರ ಚೌಡಯ್ಯ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ ಸಿದ್ದಾಪುರ, 12ನೇ ಶತಮಾನದಲ್ಲಿದ್ದ ಜಾತಿ ತಾರತಮ್ಯವನ್ನು ಮೆಟ್ಟಿ ನಿಂತಿದ್ದ ಅಂಬಿಗರ ಚೌಡಯ್ಯ ತನ್ನ ವೃತ್ತಿಯ ಮೇಲೆ ಅತ್ಯಂತ ಗೌರವ ಹೊಂದಿದ್ದು, ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು ಎನ್ನುತ್ತಾ, ಜಾತೀಯತೆಯನ್ನು ತನ್ನ ವಚನಗಳಲ್ಲಿ ತೀಕ್ಷ್ಣವಾಗಿ ವಿರೋಧಿಸಿದ್ದಾನೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ಪೂಜಾರಿ, ಪ್ರಾಂಶುಪಾಲ ಕೆ. ಸದಾಶಿವ ರಾವ್, ತಹಸೀಲ್ದಾರ್ ಟಿ.ಜೆ. ಗುರುಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಂಕುಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಶಿಂಧೆ ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಸ್ವಾಗತಿಸಿದರು. ಪೂರ್ಣ ಪ್ರಜ್ಞ ಕಾಲೇಜಿನ ಉಪನ್ಯಾಸಕ ಮಂಜುನಾಥ ಕರಬ ನಿರೂಪಿಸಿದರು. ಪ್ರಜ್ಞಾ ಮಾರ್ಪಳ್ಳಿ ವಂದಿಸಿದರು. ಎಸ್.ಎಂ. ಮೀನಾಕ್ಷಿ ಅವರಿಂದ ಶ್ರೀನಿಜಶರಣ ಅಂಬಿಗರ ಚೌಡಯ್ಯ ಅವರ ವಚನ ಗಾಯನ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

