ಉಡುಪಿ: ಗುರುವಂದನೆ 11, 12ರಂದು
ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಶ್ರೀಕಾಣಿಯೂರು ಮಠ ಮತ್ತು ತಿರುಪತಿಯ ದಾಸಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ಜು.11 ಮತ್ತು 12ರಂದು ಉಡುಪಿ ರಾಜಾಂಗಣದಲ್ಲಿ ವೈಭವದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 160ಕ್ಕೂ ಹೆಚ್ಚು ಭಜನಾ ಮಂಡಳಿಗಳ 6,000ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಲಿದ್ದಾರೆ.
ಈ ಬಗ್ಗೆ ಪರ್ಯಾಯ ಮಠದ ಶ್ರೀವಿದ್ಯಾವಲ್ಲಭ ತೀರ್ಥರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜು. 11ರಂದು ಮಧ್ಯಾಹ್ನ 3 ಗಂಟೆಗೆ ನಗರ ಸಂಕೀರ್ತನೆಯೊಂದಿಗೆ ಸಂಸ್ಕೃತ ಮಹಾವಿದ್ಯಾಲಯದಿಂದ ಭವ್ಯ ಮೆರವಣಿಗೆಯಲ್ಲಿ ಭಜನಾಮಂಡಳಿಗಳು ರಾಜಾಂಗಣಕ್ಕೆ ಆಗಮಿಸಲಿವೆ. ಅಲ್ಲಿ 5 ಗಂಟೆಗೆ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು, ಶ್ರೀವಿದ್ಯಾವಲ್ಲಭ ತೀರ್ಥರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಭ್ಯಾಗತರಾಗಿ ತಿರುಪತಿ ತಿರುಮಲ ದೇವಸ್ಯಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ಗೋಪಾಲ್, ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್, ದಾಸ ಸಾಹಿತ್ಯ ಪ್ರಾಜೆಕ್ಟ್ ವಿಶೇಷಾಧಿಕಾರಿ ವಿದ್ವಾನ್ ಪಿ.ಆರ್. ಆನಂದ ತೀರ್ಥಾಚಾರ್ ಭಾಗವಹಿಸಲಿದ್ದಾರೆ.
ನಂತರ 6.30ಕ್ಕೆ ಕೃಷ್ಣ ಮಠದ ಒಳಗೆ ವೆಂಕಟಕೃಷ್ಣ ಮಂಟಪವನ್ನು ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥರು ಉದ್ಘಾಟಿಸಲಿದ್ದಾರೆ.
ಜು. 12ರಂದು ಬೆಳಗ್ಗೆ 6.30ಕ್ಕೆ ರಥಬೀದಿಯಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರ ಅಧ್ಯಕ್ಷತೆಯಲ್ಲಿ, ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥರು ಮತ್ತು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ಆಶೀವರ್ಚನ ನೀಡಲಿದ್ದಾರೆ. ಅತಿಥಿಗಳಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಶಾಸಕ ಪ್ರಮೋದ್ ಮಧ್ವರಾಜ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ದಾಸ ಸಾಹಿತ್ಯ ಪ್ರಾಜೆಕ್ಟ್ ವಿಶೇಷಾಧಿಕಾರಿ ವಿದ್ವಾನ್ ಪಿ.ಆರ್. ಆನಂದ ತೀರ್ಥಾಚಾರ್ ಅವರಿಗೆ ಶ್ರೀನರಸಿಂಹಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶ್ರೀಗಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಣಿಯೂರು ಮಠದ ದಿವಾನರಾದ ರಘುಪತಿ ಆಚಾರ್ಯ, ವಿದ್ವಾನ್ ಗೋಪಾಲಾಚಾರ್ಯ, ಸಂಯೋಜಕರಾದ ಕೃಷ್ಣಮೂರ್ತಿ ಆಚಾರ್ಯ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

