ಉಡುಪಿ

ದೂರದ ಊರಿನ ವಿದ್ಯಾರ್ಥಿನಿಯರಿಗೆ ಮೇಲ್ವಿಚಾರಕರ ನೇಮಿಸಿ: ಜಿಲ್ಲಾಧಿಕಾರಿ

Published On :

ಮಣಿಪಾಲ:  ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ರಕ್ಷಣೆಗಾಗಿ ಜಿಲ್ಲಾಡಳಿತ ವಿಶೇಷ ಮಾರ್ಗಸೂಚಿ ತಯಾರಿಸಿ ಅಪರಾಧ ತಡೆಗೆ ಎಲ್ಲರ ಸಹಕಾರದಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳ ಘಟನೆಗಳ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜ ಗಣ್ಯರು, ಶಾಲಾ ಕಾಲೇಜುಗಳ ಮುಖ್ಯಸ್ಥರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ಹಾಸ್ಟೆಲ್‌ಗೆ ಸೇರಿಸಿ: ಜಿಲ್ಲೆಯ ಗ್ರಾಮೀಣ ಭಾಗದಿಂದ ದೂರದ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರು ಶಾಲೆ ಮತ್ತು ಕಾಲೇಜಿನಿಂದ ಮನೆಗೆ ಹೊರಡುವ ಸಂದರ್ಭದಲ್ಲಿ ಒಬ್ಬ ಮೇಲ್ವಿಚಾರಕರನ್ನು ಬಸ್ ನಿಲ್ದಾಣದವರೆಗೆ ಬಿಡಲು ವ್ಯವಸ್ಥೆ ಮಾಡುವಂತೆ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಬಹಳ ದೂರದಿಂದ ಬರುವ ಮಕ್ಕಳನ್ನು ಸಾಧ್ಯವಾದಷ್ಟು ಹಾಸ್ಟೆಲ್‌ಗಳಿಗೆ ಸೇರಿಸಲು ಪೋಷಕರು ಪ್ರಯತ್ನಿಸುವಂತೆ ಹೇಳಿದರು.
ಸ್ವಯಂರಕ್ಷಣೆ ತರಬೇತಿ: ಶಾಲೆಗಳಲ್ಲಿ ವಿದ್ಯಾರ್ಥಿ ಪೊಲೀಸ್ ಸಮನ್ವಯ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳ ಆತ್ಮವಿಶ್ವಾಸ, ಸ್ವಯಂರಕ್ಷಣೆಯ ಬಗ್ಗೆ ಸೂಕ್ತ ತರಬೇತಿ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ವಾಹನದಲ್ಲಿರುವ ಚಾಲಕರು ಹಾಗೂ ಸಿಬ್ಬಂದಿಗೆ, ಆಟೋ ಚಾಲಕರಿಗೆ ಅರಿವು, ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಲೇಖಕಿ ವೈದೇಹಿ, ಜಿಪಂ ಉಪಾಧ್ಯಕ್ಷೆ ಮಮತಾ ಶೆಟ್ಟಿ, ಜಿ.ಪಂ. ಸಿಇಓ ಎಂ. ಕನಗವಲ್ಲಿ, ಅಪರ ಜಿಲ್ಲಾಧಿಕಾರಿ ಕುಮಾರ, ಉಪ ವಿಭಾಗಾಧಿಕಾರಿ ಯೋಗೇಶ್ವರ್, ಶಿಕ್ಷಣ- ಮಕ್ಕಳ- ಮಹಿಳಾ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.