ನಂದಿಕೂರು-ಪಾದೂರು ವಿದ್ಯುತ್ ಲೈನ್ ಸರ್ವೇಗೆ ಸ್ಥಳೀಯರ ವಿರೋಧ
ಮಣಿಪಾಲ: ಉಡುಪಿ ತಾಲೂಕಿನ ನಂದಿಕೂರು- ಪಾದೂರು ನಡುವೆ 110 ಕಿಲೋ ವ್ಯಾಟ್ ವಿದ್ಯುತ್ ಮಾರ್ಗ ನಿರ್ಮಿಸಲು ಅಗತ್ಯ ಭೂಸ್ವಾಧೀನದ ಬಗ್ಗೆ ಸಮೀಕ್ಷೆ ನಡೆಸಲು ಅವಕಾಶ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಅವರು ರೈತರಲ್ಲಿ ಮಾಡಿದ್ದ ಮನವಿಗೆ ಈ ಗ್ರಾಮಗಳ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಭೂಸ್ವಾದೀನದ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷ್ಯತೆಯಲ್ಲಿ ಬುಧವಾರ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ನಂದಿಕೂರು- ಪಾದೂರು ಗ್ರಾಮದ ಜನತೆ, ಕೃಷಿಕರು ಮತ್ತು ಜನಜಾಗೃತಿ ಸಮಿತಿ ಕಾರ್ಯಕರ್ತರು, ವಿದ್ಯುತ್‌ಲೈನ್ ಹಾದು ಹೋಗುವ ರೂಟ್ ನಕ್ಷೆ ಮತ್ತು ಭೂಮಿ ಕಳೆದುಕೊಳ್ಳುವವರಿಗೆ ಪರಿಹಾರದ ಬಗ್ಗೆ ಜನರಿಗೆ ಸಮಗ್ರ ಮಾಹಿತಿಯನ್ನು ನೀಡಬೇಕು. ಲೈನ್ ಹಾದು ಹೋಗುವ ಶೇ 80ರಷ್ಟು ಪ್ರದೇಶ ಕೃಷಿ ಭೂಮಿ ಆಗಿದ್ದು, ಇಲ್ಲಿ ಅಕ್ಟೋಬರ್‌ವರೆಗೆ ಈ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ನಡೆಯುವ ಕಾರಣ ಸ್ಥಳ ಸಮೀಕ್ಷೆ ನಡೆಸಲು ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದರು.
ಕೊನೆಗೆ ಜಿಲ್ಲಾಧಿಕಾರಿ ಜನರ ಆಗ್ರಹವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ, ತಹಸೀಲ್ದಾರ್ ದುರ್ಗಾಪ್ರಸಾದ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಯ್ಯ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

