ಉಡುಪಿ

'ಡಿನೋಟಿಫಿಕೇಶನ್ ಹಗರಣ ಮುಚ್ಚಿಹಾಕಲು ಅಧಿವೇಶನ ಮೊಟಕು'

Published On :

ಉಡುಪಿ: ಕಾಂಗ್ರೆಸ್ ಸರ್ಕಾರದ ಡಿನೋಟಿಫಿಕೇಶನ್ ಹಗರಣದಲ್ಲಿ ಕೋಟ್ಯಂತರ ರುಪಾಯಿ ಹಸ್ತಾಂತರವಾಗಿದೆ. ಇದನ್ನು ಮುಚ್ಚಿ ಹಾಕುವುದಕ್ಕಾಗಿಯೇ ಕಾಂಗ್ರೆಸ್ ಸರ್ಕಾರ ಹಾಲಿ ನಡೆಯುತ್ತಿದ್ದ ವಿಧಾನಸಭಾ ಅಧಿವೇಶನವನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವಂತೆ ಮಾಡಿದೆ ಎಂದು ಉಡುಪಿ - ಚಿಕ್ಕಮಗಳೂರು  ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
 ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಕಾಲದಲ್ಲಿ ಕಾನೂನಿನ ಚೌಕಟ್ಟಿನೊಳಗೆ ನಡೆದ ಸಣ್ಣಪುಟ್ಟ ಡಿನೋಟಿಫಿಕೇಶನ್‌ಗಳನ್ನು ದೊಡ್ಡದು ಮಾಡಿ ಪ್ರತಿಭಟನೆ, ಹೋರಾಟಗಳನ್ನು ಮಾಡಿದ ಕಾಂಗ್ರೆಸ್, ಈಗ ಖುದ್ದು ತಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೂರಾರು ಕೋಟಿ ರುಪಾಯಿ ಮೌಲ್ಯದ ನೂರಾರು ಎಕರೆ ಭೂಮಿಯನ್ನು ಡಿನೋಟಿಫಿಕೇಶನ್‌ಗೆ ಸಹಿ ಮಾಡಿರುವ ಹಗರಣ ಬಹಿರಂಗವಾದಾಗ ಸುಮ್ಮನಿದೆ. ಈ ಬಗ್ಗೆ ಬಿಜೆಪಿ ವಿಧಾನಸಭೆಯಲ್ಲಿ ಚರ್ಚೆ ಮಾಡುವುದಕ್ಕೆ ಸಿದ್ಧ ಇದ್ದರೂ ಮುಖ್ಯಮಂತ್ರಿಗಳು ತಾವು ಮಾಡಿರುವ ತಪ್ಪನ್ನು ಮುಚ್ಚಿಡುವುದಕ್ಕೆ, ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿಯಿಂದ ಪಾರಾಗುವುದಕ್ಕೆ ಅದಿವೇಶನವನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವಂತೆ ಮಾಡಿದ್ದಾರೆ ಎಂದು ಸಂಸದೆ ಶೋಭಾ ಆರೋಪಿಸಿದರು.
 ವಿಧಾನಸಭಾ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದು ವಿಧಾನ ಪರಿಷತ್ ಅಧ್ಯಕ್ಷರಿಗೆ ಗೊತ್ತಿರಲಿಲ್ಲ. ಆದ್ದರಿಂದ ಅವರು ನಿಗದಿಯಂತೆ ಬುಧವಾರದವರೆಗೆ ಅಧಿವೇಶನ ನಡೆಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಈ ರೀತಿ ಮೊದಲ ಬಾರಿಗೆ ಆಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಅಕ್ರಮ ಡಿನೋಟಿಫಿಕೇಶನ್ ಹಗರಣವೇ ಕಾರಣ ಎಂದು ಶೋಭಾ ಟೀಕಿಸಿದರು.
 ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ವಕ್ತಾರ ಮಟ್ಟಾರು ರತ್ನಾಕರ ಶೆಟ್ಟಿ, ಕಾರ್ಯದರ್ಶಿ ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.