ಉಡುಪಿ

ಕಾರಂತರ ಮನೆ ಮರುನಿರ್ಮಾಣಕ್ಕೆ ಮತ್ತೆ ತಡೆ: ಯಥಾಸ್ಥಿತಿ ಪಾಲನೆಗೆ ಸಚಿವೆ ಉಮಾಶ್ರೀ ಆದೇಶ

Published On :

ಪುತ್ತೂರು: ಇಲ್ಲಿನ ಬಾಲವನದಲ್ಲಿ ಶಿಥಿಲಾವಸ್ಥೆಯಲ್ಲಿರುವ, ಪ್ರಸ್ತುತ ವಸ್ತು ಸಂಗ್ರಹಾಲಯ ಆಗಿರುವ ಡಾ.ಶಿವರಾಮ ಕಾರಂತರ ಮನೆಯನ್ನು ಮೂಲ ಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪುನರ್ ನಿರ್ಮಾಣ ಮಾಡುವ ಯೋಜನೆ ಹಮ್ಮಿಕೊಂಡಿರುವಾಗಲೇ ಸದ್ಯಕ್ಕೆ ಯಥಾಸ್ಥಿತಿ ಕಾಪಾಡಿಕೊಂಡು ಬರುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಜಿಲ್ಲಾಧಿಕಾರಿಗೆ ಆದೇಶ ನೀಡಿದ್ದಾರೆ.
ಕಾರಂತರ ಮನೆ ಕುಸಿದು ಬೀಳುವ ಸ್ಥಿತಿಯಲ್ಲಿದ್ದು, ಗೋಡೆ ಮತ್ತು ಛಾವಣಿಗಳು ಗೆದ್ದಲು ತಿಂದು ಶಿಥಿಲಗೊಂಡಿದೆ. ಈ ನಿಟ್ಟಿನಲ್ಲಿ ಬಾಲವನ ಸಮಿತಿ ಅಭಿಪ್ರಾಯದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸ್ತಾವನೆ ಮತ್ತು ಕ್ರಿಯಾಯೋಜನೆ ಕಳುಹಿಸಿಲಾಗಿದ್ದು, ಇಲಾಖೆಯಿಂದ ರು. 30 ಲಕ್ಷ ಬಿಡುಗಡೆಯಾಗಿತ್ತು.
ಈ ಕುರಿತು ಡಾ. ಕಾರಂತರ ಪುತ್ರಿ ಕ್ಷಮಾರಾವ್ ಅಭಿಪ್ರಾಯ ಪಡೆಯಲಾಗಿತ್ತು. ಜೊತೆಗೆ ಸಾಹಿತಿಗಳು, ಬಾಲವನ ಅಭಿವೃದ್ಧಿ ಸಮಿತಿ ಸಭೆ ನಡೆಸಿ ಅವರ ಅಭಿಪ್ರಾಯವನ್ನೂ ಪಡೆಯಲಾಗಿತ್ತು. ಆದರೆ ಇದೀಗ ಕಾರಂತರ ಮನೆಯನ್ನು ಯಾವ ರೀತಿ ಸಂರಕ್ಷಣೆ ಮಾಡಬೇಕು ಎನ್ನುವ ಕುರಿತು ಬಾಲವನ ಅಭಿವೃದ್ಧಿ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರಾಚ್ಯವಸ್ತು ಸಂರಕ್ಷಣಾ ಇಲಾಖೆ ಜಂಟಿಯಾಗಿ ಸ್ಥಳ ಪರಿಶೀಲನೆ ಕೈಗೊಳ್ಳುವವರೆಗೆ ಯಾವುದೇ ರೀತಿ ಮುಂದುವರಿಯಬಾರದಾಗಿ  ಸಚಿವೆ ಆದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿ ಈ ಕುರಿತು, ಬಾಲವನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಸಹಾಯಕ ಕಮಿಷನರ್‌ಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.