ಉಡುಪಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅವಲೋಕನಾ ಸಭೆ
ಉಡುಪಿ: ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅವಲೋಕನ ಸಭೆಯು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಕೇಂದ್ರದಲ್ಲಿ ಆಡಳಿತಕ್ಕೆ ಬಂದಿರುವ ನೂತನ ಬಿಜೆಪಿ ಸರ್ಕಾರಕ್ಕೆ ಶುಭ ಹಾರೈಸಲಾಯಿತು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದೆ ಶೋಭಾ ಕರಂದ್ಲಾಜೆ ಅವರ ಭರ್ಜರಿ ವಿಜಯದ ಬಗ್ಗೆ ಅಭಿನಂದನಾ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಮೋರ್ಚಾದ ಚಟುವಟಿಕೆಗಳ ಅವಲೋಕನಕ್ಕಾಗಿ ಆಗಮಿಸಿದ ಪೀರಾ ಹುಸೇನ್ ಹೊಸಳ್ಳಿ ಮಾತನಾಡಿ, ಈ ಬಾರಿಯ ಬಿಜೆಪಿ ಗೆಲವಿನಲ್ಲಿ ಅಲ್ಪಸಂಖ್ಯಾತ ಸಮುದಾಯ ತೋರಿದ ಗರಿಷ್ಠ ಒಲವಿನ ಬಗ್ಗೆ ವಿಶ್ಲೇಷಣೆ ನಡೆಸಿದರು. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ರಾಷ್ಟ್ರದ ಜನತೆಯನ್ನು ಒಂದೇ ತಾಯಿ ಮಕ್ಕಳಂತೆ ನೋಡಿಕೊಳ್ಳುವುದರಲ್ಲಿ ಸಂಶಯ ಬೇಡವೆಂದು ಆಶಯ ವ್ಯಕ್ತಪಡಿಸಿದರು.
ರಾಜ್ಯ ಮೋರ್ಚಾ ಕಾರ್ಯದರ್ಶಿ ಎಂ. ಸಲೀಂ ಅಂಬಾಗಿಲು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೆರಾ ಲ್ಡ್ ಫೆರ್ನಾಂಡಿಸ್, ಹಿರಿಯರಾದ ಬಿಜೆಪಿ ನಾಯಕ ಹಾಜಿ ಕರಾಮತ್ ಅಲಿ ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರೀಸ್ ಅಹಮದ್ ಸಾಸ್ತಾನ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

