ಉಡುಪಿ

ಕಾರ್ಕಳ ಬಾಹುಬಲಿ ಮಸ್ತಕಾಭಿಷೇಕ; ಅಭಿವೃದ್ಧಿ ಕಾಮಗಾರಿ ಸಮೀಕ್ಷೆ

Published On :

ಕಾರ್ಕಳ: ಇಲ್ಲಿನ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು 2015ನೇ ಸಾಲಿನ ಜನವರಿ, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಉತ್ಸವ ಮತ್ತು ಅಭಿವೃದ್ಧಿ ಕಾರ್ಯಗಳ ಸಮೀಕ್ಷೆ ನಡೆಸಲು ಯೋಜನೆ ರೂಪಿಸಲು ಕರ್ನಾಟಕದ ವಿಪಕ್ಷ ಮುಖ್ಯ ಸಚೇತಕ ಕಾರ್ಕಳ ಶಾಸಕ ಸುನಿಲ್ ಕುಮಾರ್ ಇತ್ತೀಚೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಪ್ರಮುಖರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕರು ಮಾತುಕತೆ ನಡೆಸಿದರು. ಕಾರ್ಕಳ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯದರ್ಶಿ ಎಂ.ಕೆ.  ವಿಜಯಕುಮಾರ್ ಶಾಸಕರನ್ನು ಸ್ವಾಗತಿಸಿ, ಬಾಹುಬಲಿ ಮಹಾಮಸ್ತಕಾಭಿಷೇಕದ ಮಹತ್ವ, ಆ ಸಂದರ್ಭದಲ್ಲಿ ದೇಶ ವಿದೇಶದಿಂದ ಬರುವ ಯತ್ರಾರ್ಥಿಗಳಿಗೆ ವ್ಯವಸ್ಥೆ, ಕಾರ್ಕಳ ನಗರ ಹಾಗೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಆಗಬೇಕಾಗಿರುವ ಕೆಲಸ ಕಾರ್ಯಗಳ ಬಗ್ಗೆ ಶಾಸಕರಿಗೆ ವಿವರಿಸಲಾಯಿತು.
ಕಾರ್ಕಳದ ಆನೆಕೆರೆಯ ನಡುವೆ ಇರುವ ಕೆರೆಬಸದಿಯ ಆವರಣ, ಅದರ ಸುತ್ತ ಇರುವ ಆನೆಕೆರೆ ಮತ್ತು ಸಿಗಡಿಕೆರೆಯ ಅಭಿವೃದ್ಧಿಗೂ ಈಗಾಗಲೇ ಕಾರ್ಯ ತತ್ಪರನಾಗಿದ್ದೇನೆ ಎಂದು ಶಾಸಕರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಈ ವರ್ಷ ಉತ್ಸವದಲ್ಲಿ ಭಾಗವಹಿಸುವಂತೆ ಎಲ್ಲ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಹೇಳಿದರು. ಭಾರತೀಯ ಜೈನ ಮಿಲನ್‌ನ ವಲಯ ನಿರ್ದೇಶಕ ಅಭಯಕುಮಾರ್, ಸನ್ಮಿತ್ರ ಜೈನ ಸಂಘದ ಅಧ್ಯಕ್ಷ ಶ್ರೀವರ್ಮ ಜೈನ್, ಜೈನ ಮಿಲನ ಅಧ್ಯಕ್ಷ ರಂಜಿತ್ ಜೈನ್, ದ.ಕ. ಹಾಲು ಒಕ್ಕೂಟದ ನಿರ್ದೇಶಕ ನವೀನಚಂದ್ರ ಜೈನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.