ಅದಮಾರು ಮಠ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ ಆರಂಭ
ಉಡುಪಿ: ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹಿರಿಯಡಕ ಸಮೀಪದ ಶಿರೂರು ನಿವಾಸಿ, ಎಂಜಿನಿಯರಿಂಗ್ ಪದವೀಧರ ಶ್ರೀಶ ಎಸ್. ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವ ನಾನಾ ವಿಧಿವಿಧಾನಗಳು ಭಾನುವಾರ ಆರಂಭಗೊಂಡವು. ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಶ್ರೀಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು, ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀಶ ಎಸ್. ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶ್ರೀವಿಶ್ವಪ್ರಿಯತೀರ್ಥರು, ಶ್ರೀಶ ಅವರು ಕುಂಜಾರುಗಿರಿ ದೇವಳ, ಪಾಜಕ ಕ್ಷೇತ್ರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅದಮಾರು ಮೂಲಮಠದಲ್ಲಿ ಗಣಹೋಮವೇ ಮೊದಲಾದ ಧಾರ್ಮಿಕ ಆಚರಣೆಗಳು ಮಠದ ವಿದ್ವಾಂಸ ಶಿಬರೂರು ವಾಸುದೇವ ಆಚಾರ್ಯರ ನೇತೃತ್ವದಲ್ಲಿ ನಡೆಯಿತು. ಬಳಿಕ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಶ್ರೀಶ ಅವರಿಗೆ ಫಲಮಂತ್ರಾಕ್ಷತೆ ನೀಡಿ ಉತ್ತರಾಧಿಕಾರಿ ನೇಮಕಕ್ಕೆ ಅಧಿಕೃತ ಚಾಲನೆ ನೀಡಿದರು. ಮಿಕ್ಕುಳಿದ ವಿಧಿವಿಧಾನಗಳು ಸೋಮವಾರದಿಂದ ಕುಂಜಾರುಗಿರಿ ದೇವಸ್ಥಾನ ಮತ್ತು ಪಾಜಕ ಸಮೀಪದ ಬಾಣತೀರ್ಥ ಮಠದಲ್ಲಿ ನಡೆಯಲಿವೆ.
19ರಂದು ಸನ್ಯಾಸ ಸ್ವೀಕಾರ: ಜೂ.19ರಂದು ಕುಂಜಾರು ದೇವಳದಲ್ಲಿ ಸನ್ಯಾಸಸ್ವೀಕಾರ, ವೇದಾಂತ ಸಾಮ್ರಾಜ್ಯಾಧಿಪತಿಯಾಗಿ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

