ಕನ್ನಡದಲ್ಲೇ ಉನ್ನತ ಶಿಕ್ಷಣ: ಅಡಿಗ ಆಗ್ರಹ
ಉಡುಪಿ: ಉನ್ನತ ಶಿಕ್ಷಣವೂ ಕನ್ನಡ ಮಾಧ್ಯಮದಲ್ಲಿಯೇ ಸಿಗುವಂತಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಗ್ರಹಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ, ನಗರದ ಪೂರ್ಣಪ್ರಜ್ಞಾ ಆಡಿಟೋರಿಯಂನ ಸುಶೀಲಾ ಉಪಾಧ್ಯಾಯ ಸಭಾಂಗಣದ ವಿಬುಧೇಶ ತೀರ್ಥ ವೇದಿಕೆಯಲ್ಲಿ ನಡೆಯುತ್ತಿರುವ ಉಡುಪಿ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದರು.
ಮಕ್ಕಳ ಶಿಕ್ಷಣ ಮಾಧ್ಯಮ ನಿರ್ಧರಿಸುವವರು ಹೆತ್ತವರು ಎಂಬ ಸುಪ್ರೀಂ ಕೋರ್ಟ್ನ ತೀರ್ಪು ಏನೇ ಇರಲಿ, ಉಡುಪಿ ಜಿಲ್ಲೆಯಲ್ಲಂತೂ ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳು ಇನ್ನೂ ಇದ್ದಾರೆ. ಮಾತ್ರವಲ್ಲ ಕನ್ನಡ ಭಾಷೆ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸುವ ವಿದ್ಯಾರ್ಥಿಗಳೂ ಇದ್ದಾರೆ. ಕಳೆದ ವರ್ಷದ 10ನೇ ತರಗತಿಯಲ್ಲಿ 23 ಮಂದಿ ಕನ್ನಡ ಭಾಷಾ ವಿಷಯದಲ್ಲಿ 100 ಅಂಕಗಳಿಸಿದ್ದರೆ. ಈ ವರ್ಷ 28 ಮಂದಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. ಆದ್ದರಿಂದ ನಿರಾಶರಾಗುವ ಅಗತ್ಯ ಇಲ್ಲ ಎಂದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ಅಂಬಾತನಯ ಮುದ್ರಾಡಿ, ಮಾಜಿ ಶಾಸಕ ಕೆ. ರಘುಪತಿ ಭಟ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ ಕಲ್ಕೂರ, ವಿದ್ಯಾಂಗ ಉಪನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಶಿಕ್ಷಣಾಧಿಕಾರಿ ರವಿಶಂಕರ್, ಸ್ಥಳೀಯ ನಗರಸಭಾ ಸದಸ್ಯೆ ಗೀತಾ ರವಿ ಶೇಟ್, ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ ನಾರಾಯಣ ಖಾರ್ವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಕೋಶಾಧಿಕಾರಿ ಕೆ. ಸುಬ್ರಹ್ಮಣ್ಯ ಬಾಸ್ರಿ ಇದ್ದರು.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿ, ಸಂಚಾಲಕ ಮರಳಿ ಕಡೆಕಾರ್ ನಿರೂಪಿಸಿದರು.
8 ಪುಸ್ತಕ ಬಿಡುಗಡೆ
ಪುಸ್ತಕ ಮಳಿಗೆಯನ್ನು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಚಿತ್ರಕಲಾ ಪ್ರದರ್ಶನವನ್ನು ಗೋಪಾಲ ಸಿ. ಬಂಗೇರ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ಪ್ರಕಟಿಸಿದ 8 ಪುಸ್ತಕಗಳನ್ನು ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಮಾಡಿದರು.
ಮೆರವಣಿಗೆ: ಅಧ್ಯಕ್ಷ ಪ್ರೊ. ರಾಮದಾಸ್ ದಂಪತಿಯನ್ನು ಅವರ ಮನವಿಯಂತೆ ಅತ್ಯಂತ ಸರಳ ಮೆರವಣಿಗೆಯಲ್ಲಿ ಪಕ್ಕದ ಪೂರ್ಣಪ್ರಜ್ಞಾ ಕಾಲೇಜಿನಿಂದ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ಕ.ಸಾ.ಪ. ಜಿಲ್ಲಾಧ್ಯಕ್ಷ ಸುರೇಂದ್ರ ಅಡಿಗ ಪರಿಷತ್ ಧ್ವಜ, ನಗರಸಭಾ ಸದಸ್ಯ ಶ್ಯಾಮಪ್ರಸಾದ್ ಕುಡ್ವ ರಾಷ್ಟ್ರಧ್ವಜಾರೋಹಣ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

