ಉಡುಪಿ

ಬೆಳಪು ಗ್ರಾಪಂ ಅಭಿವೃದ್ಧಿ ಅಧ್ಯಯನಕ್ಕೆ ತಂಡ ಭೇಟಿ

Published On :

ಪಡುಬಿದ್ರಿ: ಇಲ್ಲಿನ ಬೆಳಪು ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಬಗ್ಗೆ ಅಧ್ಯಯನ ನಡೆಸಲು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ, ಕುಮಟ, ಭಟ್ಕಳ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜಿಲ್ಲಾ ಜಲ ನಿರ್ಮಲ ಯೋಜನೆ, ಜಿಲ್ಲಾ ನೆರವು ಘಟಕದ ಉಪನಿರ್ದೇಶಕರ ತಂಡ ಆಗಮಿಸಿತ್ತು. ಬೆಳಪು ಗ್ರಾಪಂನ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ತಮ್ಮ ಗ್ರಾಪಂನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಗ್ರಾಮದಲ್ಲಿ ಅನುಷ್ಠಾನಗೊಂಡ ಸಮಗ್ರ ಕುಡಿಯುವ ನೀರಿನ ವ್ಯವಸ್ಥೆ, ಕುಡಿಯುವ ನೀರು ಶುದ್ಧೀಕರಣ ಘಟಕ, ಸ್ವಯಂ ಚಾಲಿತ ಘನ ತ್ಯಾಜ್ಯ ವಿಲೇವಾರಿ ಘಟಕ, ಸುವರ್ಣ ಗ್ರಾಮ ಯೋಜನೆ ಅನುಷ್ಠಾನ, ಸ್ವಜಲಧಾರಾ ಯೋಜನೆ, ಜಲಾನಯನ ಯೋಜನೆ, ಸ್ವಚ್ಛ ಗ್ರಾಮ ಯೋಜನೆ, ಸಂಪೂರ್ಣ ನೈರ್ಮಲ್ಯ ಯೋಜನೆ, ಪರಿಸರ ಸಂರಕ್ಷಣಾ ಯೋಜನೆ ಮತ್ತು ವಸತಿ ಬಡಾವಣೆ ಅನುಷ್ಠಾನ, ಗ್ರಾಮದ ಶಿಕ್ಷಣ ವ್ಯವಸ್ಥೆ ಇತ್ಯಾದಿಗಳನ್ನು ವೀಕ್ಷಿಸಿದ ತಂಡ ತನ್ನ ಮೆಚ್ಚುಗೆ ವ್ಯಕ್ತಪಡಿಸಿತು.
ತಂಡದಲ್ಲಿ ಜಿಲ್ಲಾ ನೆರವು ಘಟಕದ ಸಹಾಯಕ ನಿರ್ದೇಶಕ ಜಿ.ಕೆ. ರಾಘವೇಂದ್ರ, ಹೊನ್ನಾವರ ತಾಲೂಕು ಗ್ರಾಪಂ ಅಧ್ಯಕ್ಷರ ಒಕ್ಕೂಟದ ಅಧ್ಯಕ್ಷ ತಿಲಕ್  ಗೌಡ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಬೆಳಪು ಪಂಚಾಯ್ತಿ ಪ್ರಭಾರ ಅಧ್ಯಕ್ಷ ಪ್ರಕಾಶ್ ರಾವ್ ಪಟೇಲ್, ಸದಸ್ಯ ಸುರೇಶ್ ದೇವಾಡಿಗ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಸ್ಲಂ, ಕಾರ್ಯದರ್ಶಿ ಅಪ್ಪು ಶೇರಿಗಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.