ಉಡುಪಿ

ರಾಜ್ಯಮಟ್ಟದ ಹಲಸು ಮೇಳ ಇಂದು, ನಾಳೆ

Published On :

ಕಾರ್ಕಳ: ಇಲ್ಲಿನ ಪುಲ್ಕೇರಿ ಶ್ರೀ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ 28, 29ರಂದು ರಾಜ್ಯಮಟ್ಟದ ಹಲಸಿನ ಮೇಳ ನಡೆಯಲಿದೆ.
 ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಮದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ ನೀಡಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
 ಸಂಸದೆ ಶೋಭಾ ಕರಂದ್ಲಾಜೆ, ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಕುಲಪತಿ ಡಾ. ಸಿ. ವಾಸುದೇವಪ್ಪ, ಬೆಂಗಳೂರು ಹೆಬ್ಬಾಳ ಕೃಷಿ ವಿಶ್ವ ವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎನ್. ನಾಗರಾಜ್, ಬೆಂಗಳೂರು ಹೆಬ್ಬಾಳ ವಲಯ ಯೋಜನಾ ನಿರ್ದೇಶನಾಲಯದ ವಲಯ ನಿರ್ದೇಶಕ ಡಾ. ಶ್ರೀನಾಥ್ ದೀಕ್ಷಿತ್, ಇತರರು ಭಾಗವಹಿಸಲಿದ್ದಾರೆ.
ಸಮಾರೋಪ: 29ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಮುಖ್ಯಾಧಿಕಾರಿ ಎಂ. ಕನಗವಲ್ಲಿ ಬಹುಮಾನ ವಿತರಿಸುವರು.
ಪ್ರದರ್ಶನ, ಪ್ರಾತ್ಯಕ್ಷಿಕೆ: ರಾಜ್ಯ ಮಟ್ಟದ ಹಲಸು ಮೇಳದಲ್ಲಿ ವಿವಿಧ ಜಿಲ್ಲೆಗಳ ಹಲಸು ಬೆಳೆಗಾರರಿಂದ ಹಲಸಿನ ವಿವಿಧ ತಳಿಗಳ ಪ್ರದರ್ಶನ, ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ, ಹಲಸಿನ ವಿವಿಧ ಖಾದ್ಯಗಳ ತಯಾರಿ ಪ್ರಾತ್ಯಕ್ಷಿಕೆ ನಡೆಯಲಿದೆ. ರಾಜ್ಯ ವ್ಯಾಪ್ತಿಯಿಂದ ಸುಮಾರು 4 ಸಾವಿರ ರೈತರು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.