ಸರ್ಕಾರದ ನೈತಿಕ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳ ಬೆಂಬಲ ನಿರೀಕ್ಷೆ ಅಸಾಧ್ಯ: ಪ್ರೊ. ದಯಾನಂದ ಶೆಟ್ಟಿ
ಮಣಿಪಾಲ: ಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಸರ್ಕಾರದ ಯಾವುದೇ ನೈತಿಕ ಕಾರ್ಯಕ್ರಮಗಳಿಗೂ ಬೆಂಬಲ ನಿರೀಕ್ಷಿಸುವುದು ಅಸಾಧ್ಯ ಎಂದು ಮಾಧವ ಪೈ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ದಯಾನಂದ ಶೆಟ್ಟಿ ಹೇಳಿದರು.
ಇಲ್ಲಿನ ಮಾಧವ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ ರಾಷ್ಟ್ರೀಯ ಯುವ ನೀತಿ- 2014 ಮತ್ತು ರಾಜೀವ್ ಗಾಂಧಿ ಖೇಲ್ ಅಭಿಯಾನದ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷೀಯ ಭಾಷಣ ಮಾಡಿದರು.
ಯುವ ಶಕ್ತಿಗೆ ಉತ್ತಮ ಮಾರ್ಗದರ್ಶನ ಮುಖ್ಯ. ಯುವ ನೀತಿ ಇದಕ್ಕೆ ಪೂರಕವಾಗಿರಬೇಕು. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯ ಇಂದು ದೊರಕಿದ್ದು, ಕಲಿಕೆಯಲ್ಲಿ ಕ್ರೀಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ನೆಹರು ಯುವ ಕೇಂದ್ರ ಉಡುಪಿಯ ಯುವ ಸಮನ್ವಯಾಧಿಕಾರಿ ಸಿ.ಜೆ.ಎಫ್. ಡಿಸೋಜ ಉದ್ಘಾಟಿಸಿ, 2014ರ ರಾಷ್ಟ್ರೀಯ ಯುವನೀತಿ ಪುಸ್ತಕ ಬಿಡುಗಡೆ ಮಾಡಿದರು.
ಯುವಜನ ಸೇವಾ ಅಧಿಕಾರಿ ವಿಷ್ಣುಮೂರ್ತಿ, ಹಾರಾಡಿ ಎ.ವಿ. ಬಾಳಿಗಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನವೀನ್ ಕುಮಾರ್ ಇದ್ದರು.
ಕಾಲೇಜಿನ ರಾ.ಸೇ.ಯೋ. ಅಧಿಕಾರಿ ಡೊಂಬಯ್ಯ ಇಡ್ಕಿದು ಸ್ವಾಗತಿಸಿದರು. ಈ ಸಂದರ್ಭ 13 ಯುವಕ ಮಂಡಳಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಬಳಿಕ ರಾಜೀವ್ ಗಾಂಧಿ ಖೇಲ್ ಅಭಿಯಾನಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ದಯಾನಂದ ಶೆಟ್ಟಿ ಚಾಲನೆ ನೀಡಿದರು. ಜಾಥಾದಲ್ಲಿ ಮಾಧವ ಪೈ ಮೆಮೋರಿಯಲ್ ಕಾಲೇಜು ಎ.ವಿ. ಬಾಳಿಗ ಕಾಲೇಜು ಹಾರಾಡಿ, ಮಿತ್ರ ನರ್ಸಿಂಗ್ ಕಾಲೇಜು, ಹೈಟೆಕ್ ಪ್ಯಾರಾಮೆಡಿಕಲ್ ಕಾಲೇಜು ಸೇರಿದಂತೆ ಉಡುಪಿ ಆಸುಪಾಸಿನ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೇಂದ್ರ ಸರ್ಕಾರದ ಯೋಜನೆಯ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದರಾಗಲೀ, ಸಚಿವ, ಶಾಸಕರಾಗಲೀ ಅಥವಾ ಬೇರೆ ಯಾವುದೇ ಜನಪ್ರತಿನಿಧಿಗಳು ಭಾಗವಹಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

