ಉಡುಪಿ

ಇಂದು ವಿದ್ಯುತ್ ವ್ಯತ್ಯಯ

Published On :

ಮಂಗಳೂರು: ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಅಂಬಲಪಾಡಿ ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶುಕ್ರವಾರ ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕಿನ್ನಿಮೂಲ್ಕಿ, ಹಳೆ ಉದ್ಯಾವರ ರಸ್ತೆ, ಕಡೆಕಾರು, ಕನ್ನರ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಉದಯ ಕುಮಾರ್‌ಗೆ ಬೆಳ್ಳಿ
ಉಡುಪಿ: ಇತ್ತೀಚೆಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 35ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ವೈದ್ಯಕೀಯ ಪ್ರಯೋಗಶಾಲಾ ತಂತ್ರಜ್ಞ ಎಚ್. ಉದಯಕುಮಾರ ಶೆಟ್ಟಿ ಅವರು 50 ವರ್ಷ ಮೇಲ್ಪಟ್ಟ ಗುಂಪಿನ 4್ಢ400 ಮೀ. ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ರೈಲು ನಿಲುಗಡೆಗೆ ಸ್ವಾಗತ
ಉಡುಪಿ: ಡೆಹ್ರಾಡೂಮ್ ಕೊಚ್ಚುವೇಲಿ, ಅಮೃತಸರ ಕೊಚ್ಚುವೇಲಿ ವೇಗದೂತ ರೈಲುಗಳಿಗೆ ಉಡುಪಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಲು ರೇಲ್ವೆ ಇಲಾಖೆ ನಿರ್ಧರಿಸಿದ್ದನ್ನು ಕರ್ನಾಟಕ ಸರ್ಕಾರಿ ನಿವೃತ್ತ ನೌಕರರ ಉಡುಪಿ ಜಿಲ್ಲಾ ಸಂಘ ಸ್ವಾಗತಿಸಿದೆ. ಉತ್ತರ ಭಾರತಕ್ಕೆ, ಯಾತ್ರಾ ಸ್ಥಳಗಳಿಗೆ ಹೋಗುವ ಸಾರ್ವಜನಿಕರು, ವಿಶೇಷವಾಗಿ ನಿವೃತ್ತರು ರೈಲು ಸೌಲಭ್ಯವನ್ನು ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ, ಉಡುಪಿ ರೈಲು ನಿಲ್ದಾಣದಲ್ಲಿ ಹಾದು ಹೋಗುವ ಎಲ್ಲಾ ವೇಗದೂತ ರೈಲುಗಳಿಗೆ ನಿಲುಗಡೆ ನೀಡಬೇಕೆಂದು 2012ರ ನ. 16ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದ ನಿರ್ಣಯದ ಮೂಲಕ ಸಂಬಂಧಪಟ್ಟವರೆಲ್ಲರನ್ನು ವಿನಂತಿಸಿಕೊಳ್ಳಲಾಗಿತ್ತು. ವಿಳಂಬವಾದರೂ ಕೇಳಿಕೆ ಈಡೇರಿದ ಸಂತೋಷ ಸಂಘಕ್ಕೆ ಆಗಿದೆ. ರೇಲ್ವೆ ಸಚಿವರು, ಜನಪ್ರತಿನಿಧಿಗಳು ಸೇರಿದಂತೆ ಇದಕ್ಕೆ ಕಾರಣೀಭೂತರಾದವರೆಲ್ಲರಿಗೂ ಸಂಘ ಅಭಿನಂದನೆ ಸಲ್ಲಿಸಿದೆ ಎಂಬುದಾಗಿ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ತೋನ್ಸೆ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.