ಭ್ರೂಣಲಿಂಗ ಪತ್ತೆ ಕಾಯ್ದೆ ಪರಿಣಾಮಕಾರಿ ಜಾರಿ ಅಗತ್ಯ: ಕನಗವಲ್ಲಿ
ಉಡುಪಿ: ಸಾಮಾಜಿಕ ಅಸಮತೋಲನಕ್ಕೆ ಕಾರಣವಾಗುವ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಪರಿಣಾಮಕಾರಿ ಅನುಷ್ಠಾನವಾಗಬೇಕು ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ. ಕನಗವಲ್ಲಿ ಹೇಳಿದ್ದಾರೆ.
ನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರ ಪ್ರಗತಿ ಸೌಧದಲ್ಲಿ ಆಯೋಜಿಸಿದ್ದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಯ್ದೆ ಪರಿಣಾಮಕಾರಿ ಜಾರಿಯಾಗಲಿ: ವೈಜ್ಞಾನಿಕ ಉಪಕರಣಗಳು, ಸ್ಕ್ಯಾನಿಂಗ್ ಸೆಂಟರ್‌ಗಳು ಆರೋಗ್ಯವಂತ ಸಮಾಜಕ್ಕೆ ಪೂರಕವಾಗಿ ಕರ್ತವ್ಯ ನಿರ್ವಹಿಸಬೇಕೇ ಹೊರತು, ಭ್ರೂಣಪತ್ತೆಗಾಗಿ ಬಳಕೆ ಆಗಬಾರದು ಎಂದು ಪ್ರತಿಪಾದಿಸಿದ ಕನಗವಲ್ಲಿ, ನಮ್ಮ ಸಾಮಾಜಿಕ ವ್ಯವಸ್ಥೆ ಜತೆಗೆ ಅತ್ಯಾಧುನಿಕ ತಂತ್ರಜ್ಞಾನಗಳು ಹೆಣ್ಣು ಮಕ್ಕಳ ಜನನ ಪ್ರಮಾಣಕ್ಕೆ ಸವಾಲೊಡ್ಡಿವೆ. ಈ ನಿಟ್ಟಿನಲ್ಲಿ ತಂತ್ರಜ್ಞಾನಗಳ ಸದ್ಬಳಕೆಯಾಗಬೇಕಿದೆ ಎಂದರು.
ತರಬೇತಿ ಕೇಂದ್ರದ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಮಾಲತಿ, ಮಣಿಪಾಲ ಕೆಎಂಸಿಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಡಾ. ಪ್ರತಾಪ್ ಕುಮಾರ್ ಇದ್ದರು.
ಜಿಲ್ಲಾ ಆರೋಗ್ಯ- ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ ಸ್ವಾಗತಿಸಿದರು. ಇಲಾಖೆಯ ಮಾಹಿತಿ ಮತ್ತು ಆರೋಗ್ಯ ಶಿಕ್ಷಣಾಧಿಕಾರಿ ಸತ್ಯನಾರಾಯಣ ವಂದಿಸಿದರು.
ಉಡುಪಿಯಲ್ಲಿ 6 ವರ್ಷದೊಳಗಿನ ಮಕ್ಕಳಲ್ಲಿ 1000 ಗಂಡು ಮಕ್ಕಳಿಗೆ 958 ಹೆಣ್ಣು ಮಕ್ಕಳಿದ್ದು, ರಾಜ್ಯದಲ್ಲಿ ಈ ಅನುಪಾತ ಸಾವಿರಕ್ಕೆ 943 ಇದೆ. ದೇಶದಲ್ಲಿ ಸಾವಿರಕ್ಕೆ 914 ಇದೆ. ಹೆಣ್ಣು- ಗಂಡಿನ ಅನುಪಾತ ಇದೇ ಪ್ರಮಾಣದಲ್ಲಿ ಮುಂದುವರಿದರೆ ಹಲವು ಸಮಸ್ಯೆಗಳು ಸಂಭವಿಸಲಿವೆ.
ಡಾ ರಾಮಚಂದ್ರ ಬಾಯರಿ, ಜಿಲ್ಲಾ ಆರೋಗ್ಯ- ಕುಟುಂಬ ಕಲ್ಯಾಣಾಧಿಕಾರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

