ಉಡುಪಿ

ಸುವರ್ಣ 2ನೇ ಹಂತ ವಿಫಲ ಎಂದು ತೋರಿಸಲು ಕಾಂಗ್ರೆಸ್ ಹುನ್ನಾರ: ಭಟ್

Published On :

ಉಡುಪಿ:  ಸುವರ್ಣ ನದಿಯಲ್ಲಿ ಬೇಕಾದಷ್ಟು ನೀರಿದೆ. ಆದರೂ, ಕಾಂಗ್ರೆಸ್ ಆಡಳಿತ ಉಡುಪಿ ನಗರಸಭೆಗೆ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ. 2 ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆ ಮಾಡುತ್ತಿದ್ದು, ಕೃತಕ ಅಭಾವವನ್ನು ಸೃಷ್ಟಿಸುತ್ತಿದೆ. ಇದರ ಹಿಂದೆ ಹುನ್ನಾರ ಇದೆ ಎಂದು ಬಿಜೆಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪಿಸಿದ್ದಾರೆ.
 ಅವರು ಉಡುಪಿ ನಗರ ಬಿಜೆಪಿಯ ಸತ್ಯಶೋಧನಾ ಸಮಿತಿಯೊಂದಿಗೆ ಸುವರ್ಣ ನದಿ ಅಣೆಕಟ್ಟು ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದರು. ನಗರಸಭೆಗೆ ನೀರು ಪೂರೈಕೆ ಮಾಡುವುದಕ್ಕೆ ಬಿಜೆಪಿ ಆಡಳಿತಾವಧಿಯಲ್ಲಿ ಸುವರ್ಣ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 2ನೇ ಹಂತದ ಅಣೆಕಟ್ಟು ವಿಫಲವಾಗಿದೆ ಎಂದು ಜನತೆಗೆ ತೋರಿಸುವುದಕ್ಕೆ ಕಾಂಗ್ರೆಸ್ ಆಡಳಿತ ಕೃತಕ ನೀರಿನ ಅಭಾವವನ್ನು ಸೃಷ್ಟಿಸಿದೆ. ಅಲ್ಲದೇ ನೀರಿಲ್ಲ ಎಂದು ಹೇಳಿ ಟ್ಯಾಂಕರ್‌ಗಳಿಂದ ನೀರು ಪೂರೈಕೆ ಮಾಡಿ ಹಣ ಮಾಡುವ ದಂಧೆಯ ಹುನ್ನಾರವೂ ಇದರ ಹಿಂದಿದೆ ಎಂದು ಭಟ್ ಆರೋಪಿಸಿದ್ದಾರೆ.
 ಬಿಜೆಪಿ ಆಡಳಿತದಲ್ಲಿದ್ದಾಗ ಮಾ. 17ರವರೆಗೂ ಪ್ರತಿದಿನ ನೀರು ಪೂರೈಕೆ ಮಾಡಿತ್ತು. ಆದರೆ, ಕಾಂಗ್ರೆಸ್ ಸಾಕಷ್ಟು ನೀರಿದ್ದರೂ ಮಾ. 10ರಿಂದಲೇ 2 ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆ ಮಾಡುತ್ತಿದೆ. ಈ ಮೂಲಕ ನಗರಸಭೆಯ ಜನರನ್ನು ಶೋಷಣೆ ಮಾಡುತ್ತಿದೆ ಎಂದರು.
ನಗರಸಭೆಯ ಮಾಜಿ ಅಧ್ಯಕ್ಷರಾದ ಕಿರಣ್ ಕುಮಾರ್, ದಿನಕರ ಶೆಟ್ಟಿ, ಸದಸ್ಯರಾದ ಡಾ.ಎಂ.ಆರ್. ಪೈ, ನವೀನ್ ಭಂಡಾರಿ, ಸುಮಿತ್ರಾ ನಾಯಕ್, ಮಾಜಿ ಸದಸ್ಯ ಪ್ರಭಾಕರ ಪೂಜಾರಿ, ಬಿಜೆಪಿ ನಗರಾಧ್ಯಕ್ಷ ರಾಘವೇಂದ್ರ ಕಿಣಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.