ಮೋದಿ ಸಾರಥ್ಯಕ್ಕೆ ಜನ ಬೆಂಬಲ: ಸುನಿಲ್ ಕುಮಾರ್
ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸಾರಥ್ಯಕ್ಕೆ ಸಾರ್ವತ್ರಿಕವಾಗಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಸ್ಥಾನೀಯ ಸಮಿತಿ ಸಭೆಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವಂತೆ ಕಾರ್ಕಳ ಕ್ಷೇತ್ರದ ಜನತೆ ಕೂಡ ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ನೋಡಲು ಉತ್ಸುಕರಾಗಿದ್ದಾರೆ. ದೇಶಕ್ಕೆ ಬದ್ಧತೆ ಅಥವಾ ಭದ್ರತೆ ಎರಡು ಇಲ್ಲದ ಸರ್ಕಾರ ಮುಂದುವರಿಯುವುದು ಸಮಂಜಸವಲ್ಲ ಎಂಬ ತೀರ್ಮಾನಕ್ಕೆ ಮತದಾರರು ಬಂದಿದ್ದಾರೆ ಎಂದರು.
ಕ್ಷೇತ್ರಧ್ಯಕ್ಷ ಮಣಿರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಹಾವೀರ ಹೆಗ್ಡೆ, ಆನಂದ ಬಂಡೀಮಠ, ಉದಯ ಎಸ್. ಕೋಟ್ಯಾನ್ ಭಾಗವಹಿಸಿದ್ದರು.
ಮೊದಲ ಸುತ್ತಿನ ಸಭೆ ಮುಕ್ತಾಯ: ಹೆಬ್ರಿ, ನಾಡ್ಪಾಲು, ಕಬ್ಬಿನಾಲೆ, ಬಜಗೋಳಿ, ಈದು, ಮಿಯ್ಯರು, ನಲ್ಲೂರು, ಕಾಂತಾವರ, ಸಾಣೂರು, ಇರ್ವತ್ತೂರು, ಮುಂಡ್ಕೂರು ಸ್ಥಾನೀಯ ಸಮಿತಿಗಳ ಮೊದಲ ಸುತ್ತಿನ ಸಮಾಲೋಚನಾ ಸಭೆಗಳು ಮುಗಿದಿದ್ದು, ಇನ್ನುಳಿದ ಗ್ರಾಮ ಪಂಚಾಯಿತಿಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಸಭೆ ನಡೆಸಲಾಗುವುದು ಎಂದು ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

