ಉಡುಪಿ

ಮತದಾನ ಜಾಗೃತಿ ಕಾರ್ಯಕ್ರಮ

Published On :

ಉಡುಪಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತದಾನದ ಹಕ್ಕನ್ನು ನೀಡಿದ್ದು, ಇದನ್ನು ತಮ್ಮ ಕರ್ತವ್ಯ ಎಂದು ಪರಿಗಣಿಸಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕುಮಾರ ಅವರು ಕರೆ ನೀಡಿದ್ದಾರೆ.
ಅವರು ಸೋಮವಾರ ನಗರದ ಒಳಕಾಡಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವೀಪ್ ಮತದಾನ ಜನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಮನೆಯವರು ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಪ್ರತಿಜ್ಞಾ ಭೋದಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ತಮ್ಮ ಪೋಷಕರಿಗೆ ವಿವರಿಸಿ, ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗೆ ತೆರಳಿ ತಪ್ಪದೇ ಮತದಾನ ಮಾಡಲು ಪ್ರೇರೇಪಿಸಬೇಕು ಎಂದವರು ಹೇಳಿದರು.
ಏ.17ರಂದು ನಡೆಯುವ ಚುನಾವಣೆಯಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೂ ಮತದಾನ ಮಾಡಲು ಅವಕಾಶವಿದ್ದು, ಜಿಲ್ಲಾಡಳಿತ ಮತದಾನದ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದ್ದು, ನಾಗರಿಕರು ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿದ್ಯಾಂಗ ಇಲಾಖೆಯ ಉಪ ನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಒಳಕಾಡು ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ. ನಿರ್ಮಲಾ ಹಾಗೂ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.