ಉಡುಪಿ: ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಬುಧವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್, ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಇದ್ದರು. 61ರ ಹರೆಯದ ಹೆಗ್ಡೆ ಅವರು ಬಿ.ಎ., ಎಲ್.ಎಲ್.ಬಿ. ಪದವೀಧರರಾಗಿದ್ದಾರೆ. ತಾನು ವೃತ್ತಿಯಲ್ಲಿ ವಕೀಲನಾಗಿದ್ದು, ಪತ್ನಿ ಶೋಭಾ ಹೆಗ್ಡೆ ಕೃಷಿಕರು ಎಂದು ಆಸ್ತಿ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡಿದ್ದಾರೆ. ಹೆಗ್ಡೆ ತಮ್ಮ ಸ್ಥಿರಚರ ಒಟ್ಟು ಆಸ್ತಿ ರು. 7,79,43,128 ಆಗಿದ್ದು ರು. 84,99,442 ಸಾಲ ಹೊಂದಿರುವುದಾಗಿಯೂ ತಿಳಿಸಿದ್ದಾರೆ. ಅಲ್ಲದೇ ತಮ್ಮ ಪತ್ನಿ ಶೋಭಾ ರು. 1,23,61,945 ಆಸ್ತಿ ಮತ್ತು ರು. 81,41,369 ಸಾಲ ಹೊಂದಿದ್ದಾರೆ. ಅಲ್ಲದೆ ಹೆಗ್ಡೆ ಒಂದು ಟೋಯೋಟಾ ಕಾರು, 25 ಗ್ರಾಂ ಚಿನ್ನಾಭರಣ, ಪತ್ನಿ 950 ಗ್ರಾಂ ಚಿನ್ನಾಭರಣಗಳ ವಾರಸುದಾರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

