ಉಡುಪಿ

8 ಮಂದಿ ನಾಮಪತ್ರ ಸಲ್ಲಿಕೆ

Published On :

ಉಡುಪಿ: ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಬುಧವಾರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಒಟ್ಟು 8 ಮಂದಿ ಅಭ್ಯರ್ಥಿಗಳ 13 ನಾಮಪತ್ರ ಸಲ್ಲಿಕೆಯಾಗಿವೆ.
ಕಾಂಗ್ರೆಸ್‌ನ ಕೆ. ಜಯಪ್ರಕಾಶ್ ಹೆಗ್ಡೆ 4 ನಾಮಪತ್ರಗಳನ್ನು, ಬಿಜೆಪಿಯ ಶೋಭಾ ಕರಂದ್ಲಾಜೆ 3 ನಾಮಪತ್ರಗಳನ್ನು, ಸಿಪಿಐ(ಎಂ.ಎಲ್.) ಪಕ್ಷದ ಸಿ.ಜೆ. ಜಗನ್ನಾಥ್, ಪಕ್ಷೇತರ ಅಭ್ಯರ್ಥಿಗಳಾದ ಬಿ. ಧನಂಜಯ, ಎಂ. ಡಿ. ಮೊಯಿದ್ದೀನ್ ಖಾನ್, ಮುಂಜುನಾಥ ಜಿ., ಶ್ರೀನಿವಾಸ, ಸುಧೀರ್ ಕಾಂಚನ್ ತಲಾ ಒಂದೊಂದು ನಾಮಪತ್ರಗಳನ್ನು ಬುಧವಾರ ಸಲ್ಲಿಸಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು ಬಿಜೆಪಿ 4, ಕಾಂಗ್ರೆಸ್‌ನ 4, ಜೆಡಿಎಸ್‌ನಿಂದ 2, ಸಿಪಿಐ (ಎಂ.ಎಲ್)2, ಬಿಎಸ್‌ಪಿ, ಆಮ್ ಆದ್ಮಿ, ಸಿಪಿಐ ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ 1ರಂತೆ ಒಟ್ಟು 8 ನಾಮಪತ್ರಗಳು ಸೇರಿ 14 ಅಭ್ಯರ್ಥಿಗಳು ಒಟ್ಟು 23 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ನಾಮಪತ್ರಗಳ ಪರಿಶೀಲನೆ ಮಾ.27ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮಾ.29ರಂದು ಅವಕಾಶ ಇದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.