ದಲಿತೋದ್ಧಾರ: ಜಿಲ್ಲಾಧಿಕಾರಿ ಮಧ್ಯಪ್ರವೇಶಕ್ಕೆ ಆಗ್ರಹ
ಮಂಗಳೂರು: ಕೊರಗ ಸಮುದಾಯದ ನಂತೂರಿನ ಆರು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಮತ್ತು ಮಹಾನಗರ ಪಾಲಿಕೆಯ ಶೇ.22.75 ನಿಧಿ ದುರ್ಬಳಕೆಯಾಗದಂತೆ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಬೇಕು ಎಂದು ದ.ಕ.ಜಿಲ್ಲಾ ದಲಿತ ಹಕ್ಕುಗಳ ಸಮಿತಿ ಒತ್ತಾಯಿಸಿದೆ. ದಲಿತರ ಅಭಿವೃದ್ಧಿಗೆ ಬಳಸಬೇಕಾದ ಶೇಕಡವಾರು ನಿಧಿಯನ್ನು ರಸ್ತೆ ಕಾಮಗಾರಿ, ತಡೆಗೋಡೆ ಯೋಜನೆಗಳಿಗೆ ಬಳಸುತ್ತಿದ್ದಾರೆ. ಇದರಿಂದ ದಲಿತರ ಜ್ವಲಂತ ಸಮಸ್ಯೆಗಳಾದ ನಿವೇಶನ, ಮನೆ ದುರಸ್ತಿ, ಶೌಚಾಲಯ, ತಾಳಿಭಾಗ್ಯ, ಒಳಚರಂಡಿ ಸಂಪರ್ಕ, ವಿದ್ಯಾರ್ಥಿ ವೇತನಗಳಿಗೆ ತೊಂದರೆಯಾಗುತ್ತಿದೆ. ದಲಿತ ಕಾಲನಿಯ ರಸ್ತೆ, ಚರಂಡಿ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸಿದ್ದರೂ ಕಾಮಗಾರಿ ಅಪೂರ್ಣವಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಯನ್ನು ಸಮಿತಿ ಒತ್ತಾಯಿಸಿದೆ. ರಸ್ತೆ ಅಗಲೀಕರಣ ಸಂದರ್ಭ ಬಿಕರ್ನಕಟ್ಟೆಯಲ್ಲಿದ್ದ ದಲಿತ ಕುಟುಂಬವನ್ನು ಪುನರ್ವಸತಿ ಕೊಡಿಸುವುದಾಗಿ ಎಬ್ಬಿಸಲಾಗಿದೆ. ಇದರಲ್ಲಿ ನಾಲ್ಕು ಕುಟುಂಬ ಈಗಲೂ ಗುಡಿಸಲಲ್ಲಿ ವಾಸಿಸುತ್ತಿದೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಮಸ್ಯೆ ಪರಿಹಾರ ಕಂಡಿಲ್ಲ ಎಂದು ನಗರ ಸಮಿತಿ ಅಧ್ಯಕ್ಷ ಲಿಂಗಪ್ಪ ನಂತೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

