ಉಡುಪಿ

ರಕ್ಷಣಾ ಸಿಬ್ಬಂದಿಗೆ ಆಹ್ವಾನ

Published On :

ಮಲ್ಪೆ: ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನ ಹರಾಜು ಪ್ರಾಂಗಣದಲ್ಲಿ ಶಿಸ್ತು ಕಾಪಾಡುವುದು, ಲಂಗರು ಹಾಕಿದ ದೋಣಿಗಳನ್ನು ಕಾಯುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು, ವಾಹನಗಳ ನಿಲುಗಡೆ ಇನ್ನಿತರ ಅವಶ್ಯಕ ಕಾರ್ಯಗಳನ್ನು ಸೆಕ್ಯುರಿಟಿ ಏಜೆನ್ಸಿ ಮೂಲಕ ಜನರನ್ನು ನೇಮಿಸಿಕೊಂಡು ಕೆಲಸ ಮಾಡಲು ಆಸಕ್ತ ಸಂಘ, ಸಂಸ್ಥೆಗಳಿಂದ ಟೆಂಡರ್ ಕರೆಯಲಾಗಿದೆ. ಟೆಂಡರ್ ಅರ್ಜಿಗಳನ್ನು ಮೀನುಗಾರಿಕಾ ಇಲಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಮೇ 16ರ ಸಂಜೆ 4 ಗಂಟೆಯೊಳಗೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಲ್ಪೆ ಮೀನುಗಾರಿಕಾ ಬಂದರು, ಮಲ್ಪೆ ಇವರನ್ನು ಸಂಪರ್ಕಿಸಬಹುದು.


ಬಿಜೆಪಿ ಪ್ರತಿಭಟನೆ ಇಂದು
ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರವು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಿರುವ ಕ್ರಮವನ್ನು ವಿರೋಧಿಸಿ ಹಾಗೂ ಚೆನ್ನೈನಲ್ಲಿ ನಡೆದ ಬಾಂಬ್ ಸ್ಫೋಟದಂತಹ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಸಂಜೆ 4 ಗಂಟೆಗೆ ಉಡುಪಿ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಜಟಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.



ವಿದ್ಯುತ್ ವ್ಯತ್ಯಯ ನಾಳೆ
ಉಡುಪಿ: ಹೆಬ್ರಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 6ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಬ್ರಿ, ಶಿವಪುರ, ಖಜಾನೆ, ಮುದ್ರಾಡಿ, ವರಂಗ, ಮುನಿಯಾಲು, ಬಚ್ಚಪ್ಪು, ಸೀತಾನದಿ, ಸೋಮೇಶ್ವರ, ನಡ್ಸಾಲು, ಬೆಳಂಜೆ, ಮಡಾಮಕ್ಕಿ, ಕಳ್ತೂರು, ಸಂತೆಕಟ್ಟೆ, ಕರ್ಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.