ದಿವಾಣ ಭೀಮ ಭಟ್ಟರ ಸಂಸ್ಮರಣೆ
ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ದಿವಾಣ ಭೀಮ ಭಟ್ಟ ಶತಮಾನೋತ್ಸವ ಸಮಿತಿ ಮತ್ತು ಉಡುಪಿ ಯಕ್ಷಗಾನ ಕಲಾರಂಗದ ಸಹಯೋಗದಲ್ಲಿ ದಿವಾಣ ಭೀಮ ಭಟ್ಟರ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ತಾಳಮದ್ದಲೆ ಮತ್ತು ಸನ್ಮಾನ ಕಾರ್ಯಕ್ರಮ ಭಾನುವಾರ ಮಠದ ರಾಜಾಂಗಣದಲ್ಲಿ ಸಂಪನ್ನಗೊಂಡಿತು.
ಪರ್ಯಾಯ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥರು ಕಾರ್ಯಕ್ರಮ ಉದ್ಘಾಟಿಸಿ, ಭೀಮ ಭಟ್ಟರ ಶಿಷ್ಯ ಯಕ್ಷಗಾನ ವಿದ್ವಾಂಸ ಗಣೇಶ ಕೊಲೆಕಾಡಿ ಅವರನ್ನು ಸನ್ಮಾನಿಸಿದರು.
ನಂತರ ಮಾತನಾಡಿದ ಶ್ರೀಗಳು, ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಲು ಯಕ್ಷ ಕಲಾವಿದರನ್ನು ಗುರುತಿಸಿ, ಸನ್ಮಾನಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಯಕ್ಷಗಾನಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿದ ಹಿರಿಯ ಯಕ್ಷಗಾನ ಕಲಾವಿದರ ಸಂಸ್ಮರಣಾ ಕಾರ್ಯಕ್ರಮಗಳು ಹೆಚ್ಚುಹೆಚ್ಚು ನಡೆಯಬೇಕಾಗಿದೆ ಎಂದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಯಕ್ಷಗಾನ ವಿದ್ವಾಂಸ ವಾದಿರಾಜ ಕಲ್ಲೂರಾಯ ಅಭಿನಂದನಾ ಭಾಷಣ ಮಾಡಿದರು.
ದಿವಾಣ ಗೋವಿಂದ ಭಟ್ ಸ್ವಾಗತಿಸಿ, ಯಕ್ಷಗಾನ ಕಲಾರಂಗದ ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ 'ಸಂಧಾನ ಸಂವಾದ' ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಇದರಲ್ಲಿ ಹಿರಿಯ ಕಲಾವಿದರಾದ ಕೆ.ಜೆ. ಗಣೇಶ್ ಸಹೋದರರು, ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ, ಹಿರಣ್ಯ ವೆಂಕಟೇಶ್ವರ ಭಟ್ಟ, ವಾಸುದೇವ ರಂಗಾ ಭಟ್ಟ, ಜಯಪ್ರಕಾಶ್ ಶೆಟ್ಟಿ, ರಾಮ ಜೋಯಿಸ್ ಅರ್ಥಗಾರಿಕೆ ನಡೆಸಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

