ಶಿರಸಿ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 14 ಹಾಗೂ 17 ವರ್ಷಗಳ ವಯೋವುತಿಯೊಳಗಿನ ಅಂಗವಿಕಲ ವಿದ್ಯಾರ್ಥಿಗಳ ಕ್ರೀಡಾಕೂಟ 2012-13 ಫೆ. 2ರ ಬೆಳಗ್ಗೆ 9.30ಕ್ಕೆ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಯಲ್ಲಾಪುರ-ಮುಂಡಗೋಡ ಶಾಸಕ ವಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಕೃಷ್ಣ ನಾರಾಯಣ ಗೌಡ ಪಾಟೀಲ, ಸಂಸದ ಅನಂತಕುಮಾರ ಹೆಗಡೆ, ಹಳಿಯಾಳ ಶಾಸಕ ಸುನೀಲ್ ಹೆಗಡೆ, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಹೊರಟ್ಟಿ, ಮೋಹನ ಲಿಂಬೀಕಾಯಿ, ಎಸ್.ಎಲ್. ಘೋಟ್ನೇಕರ್, ನಿಗಮ ಮಂಡಳಿಗಳ ಅಧ್ಯಕ್ಷರು, ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಜಿಪಂ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೆಶಕರ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.