ಕಥೆ, ಕವನ ಸ್ಪರ್ಧೆಗೆ ಆಹ್ವಾನ
ಕುಮಟಾ: ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕುಮಟಾ ರೋಟರಿ ಮತ್ತು ಕಸಾಪ ಘಟಕ ಜಂಟಿಯಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕಥೆ ಮತ್ತು ಕವನ ಸ್ಪರ್ಧೆ ಆಯೋಜಿಸಿದೆ. ಕಳೆದ ವರ್ಷ ರೋಟರಿ ಅಧ್ಯಕ್ಷ ಸತೀಶ್ ನಾಯ್ಕ ಬಹುಮಾನ ಪ್ರಾಯೋಜಿಸಿ, ಉತ್ತಮ ಕಥೆಗಾರರನ್ನು ಗುರುತಿಸಿ ಪ್ರೋತ್ಸಾಹಿಸಿದ್ದರು.
ಈ ವರ್ಷ ಕಥೆ ಹಾಗೂ ಕವನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನದ ದಿನ ಮೊದಲ ಮೂರು ಸ್ಥಾನ ಪಡೆದ ಕೃತಿಗಳ ಲೇಖಕರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಎಸ್.ವಿ. ಹೆಗಡೆ ನಂದೈಯನ್ ತಿಳಿಸಿದ್ದಾರೆ. ಕಥೆ ಅಥವಾ ಕವನಗಳು ಸ್ವಂತ ರಚನೆಗಳಾಗಿದ್ದು, ಫೆ. 20ರೊಳಗೆ ಎನ್.ಆರ್. ಗಜು, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಕುಮಟಾ - ಇವರಿಗೆ ಕಳುಹಿಸಬೇಕು. ನಿಬಂಧನೆಗಳಿಗಾಗಿ ಮೊ. 9741472378 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರು. 50 ಲಕ್ಷ ಅನುದಾನ ಬಿಡುಗಡೆ
ಶಿರಸಿ: ಜಿಲ್ಲೆಯ ಸಿದ್ದಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗಡೆ ಇವರ ಹೆಸರಿನಲ್ಲಿ ಸ್ಮಾರಕ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರು. 50 ಲಕ್ಷಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

