ಶಿರಸಿ: ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮವರ್ಷಾಚರಣೆ ನಿಮಿತ್ತ ಫೆ. 9ರ ಮಧ್ಯಾಹ್ನ 3ಕ್ಕೆ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ.ಟಿ. ಹೆಗಡೆ ಅಧ್ಯಕ್ಷತೆ ವಹಿಸುವರು. ವಾಗ್ಮಿಗಳಾದ ತೇಜಸ್ವಿ ಸೂರ್ಯ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.