ಅಂಬೇಡ್ಕರ್‌ಗೆ ಅವಮಾನ ಮಾಡಿಲ್ಲ
ಮುಂಡಗೋಡ: ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ ಅವರು ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಆಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂಬ ದ್ಯಾಮಣ್ಣ ಭೋವಿವಡ್ಡರ ಅವರ ಆರೋಪ ಸತ್ಯಕ್ಕೆ ದೂರವಾದದ್ದು, ಅದು ರಾಜಕೀಯ ಪ್ರೇರಿತವಾದದ್ದು ಎಂದು ವಿವಿಧ ದಲಿತ ಸಂಘದ ಮುಖಂಡರು ಹೇಳಿದರು.
ಈಚೆಗೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿ, ಹೆಬ್ಬಾರ ಅವರು ಅಂಬೇಡ್ಕರ್ ಅವರಿಗೆ ಅಪಮಾನವಾಗುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ಯಾವುದೇ ಮಾಧ್ಯಮಗಳಲ್ಲಿ ಪ್ರಕಟವಾಗಿಲ್ಲ. ಶಿವರಾಮ ಹೆಬ್ಬಾರ ಅವರಿಗೆ ದಲಿತರ ಮೇಲೆ ಅಪಾರವಾದ ಪ್ರೀತಿ ಇದೆ. ಈ ರೀತಿ ಹೇಳಿಕೆ ನೀಡಿ ಅವರ ಮೇಲೆ ದಲಿತರನ್ನು ಎತ್ತಿ ಕಟ್ಟುವ ರಾಜಕೀಯ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಕ್ರಮ ಕೈಗೊಳ್ಳಲಿಲ್ಲ: ಭಟ್ಕಳ ತಾಲೂಕು ಬೈಲೂರ ಪ್ರೌಢಶಾಲೆ ಮುಖ್ಯಾಧ್ಯಾಪಕಿ ಯಲ್ಲಮ್ಮ ಅವರ ಮೇಲೆ ಅಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಂ. ಮೊಗೇರ ಆಡಳಿತಾತ್ಮಕವಾಗಿ ದೌರ್ಜನ್ಯ ಹಾಗೂ ಕಿರುಕುಳ ನೀಡಿದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ದೂರಿನ ಬಗ್ಗೆ ನಾಗರಿಕ ಜಾರಿ ನಿರ್ದೇಶನಾಲಯ ಮತ್ತು ಪೊಲೀಸ್ ಇಲಾಖೆ ತನಿಖೆ ನಡೆಸಿ ಬಿಇಓ ಮೊಗೇರ ಆಪಾದಿತ ಎಂದು ವರದಿ ಮಾಡಿ ಇಲಾಖಾ ಶಿಸ್ತು ಕ್ರಮಕ್ಕಾಗಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ವರದಿ ಸಲ್ಲಿಸಲಾಗಿತ್ತು. ಆದರೂ ಇದುವರೆಗೂ ಅವರ ಮೇಲೆ ಯಾವುದೇ ರೀತಿ ಕ್ರಮ ಕೈಗೊಳ್ಳಲಾಗಿಲ್ಲ ಎಂದರು.
ಉತ್ತರ ಕನ್ನಡ ಜಿಲ್ಲೆಯನ್ನು ದಲಿತ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವ ಅಗತ್ಯವಿಲ್ಲ. ದಲಿತರಿಂದ ದಲಿತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿಲ್ಲ. ದಲಿತ ಸಮುದಾಯದ ಬಡ ಜನರಿಂದ ಕೆಲಸ ಮಾಡಿಸಿ ಕೊಡುತ್ತೇನೆಂದು ಎಸ್. ಫಕ್ಕೀರಪ್ಪ ಮೋಸ ಮಾಡುತ್ತಾರೆ ಎಂದು ಶಿರಸಿಯಲ್ಲಿ ಎಂ.ಆರ್. ವಡ್ಡರ ಸತ್ಯಕ್ಕೆ ದೂರವಾದ ಸುಳ್ಳು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಇದನ್ನು ಕಠೋರವಾಗಿ ಖಂಡಿಸುತ್ತೇವೆ ಎಂದು ಆರೋಪಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಕ್ಕೀರಪ್ಪ, ದಲಿತ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಚಿದಾನಂದ ಹರಿಜನ, ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಬೆನಿತ ಸಿದ್ದಿ, ಬಿ.ಎಂ. ಮಡ್ಲಿ, ಬಸವರಾಜ ಹಳ್ಳಮ್ಮನವರ, ಹನ್ಮಂತಪ್ಪ ಬಜಂತ್ರಿ, ಬೀಮಣ್ಣ ಬೋವಿ, ಹನ್ಮಂತಪ್ಪ ಆರೆಗೊಪ್ಪ, ಬೀಮಣ್ಣ ತಳವಾರ, ಹುಲಗಪ್ಪ ಬೋವಿವಡ್ಡರ, ತಿರುಪತಿ ಕೊಂಡ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

